Showing 20 of 4469 posts • Page 47 of 224
ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ.
ಮಂಗಳೂರು ವ್ಯಾಪ್ತಿಯ ಪ್ರಾದೇಶಿಕ ಉಪ ಔಷಧ ನಿಯಂತ್ರಕ ಬಾಬು ಬಿ.ಎನ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ.
ಲಾಯಿಲದಲ್ಲಿರುವ ಜ್ಯೋತಿ ಆಸ್ಪತ್ರೆ ಮತ್ತು ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರದ ವತಿಯಿಂದ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ.
ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಮೀಣ ಕಲಾವಿದರು, ಯುವಜನರು ಮತ್ತು ಕರಕುಶಲಕರ್ಮಿಗಳು ರಚಿಸಿದ ಅಪರೂಪದ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟಕ್ಕೆಂದೇ ನಿರ್ಮಾಣವಾದ ವೇದಿಕೆ ನಮ್ಮ ಅಂಗಡಿ. ಪ್ರತೀ ವರ್ಷದಂತೆ ಈ ವರ್ಷವೂ ಆಯೋಜನೆಗೊಂಡಿದೆ
ವಿಶ್ವ ಆಟಿಸಂ ದಿನದ ಹಿನ್ನೆಲೆಯಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಆಟಿಸಂ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ನಗರದ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕೇರಳ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿ ರಸ್ತೆ ಮೂಲಕ ಕೇರಳಕ್ಕೆ ತೆರಳಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಸೀ ಬ್ರಿಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ.
ಏನಾದರೂ ಆದರೆ ರಾಜಕಾರಣಿಗಳು ಬರ್ತಾರೆ. ಆದರೆ ನಮ್ಮ ಸಮಸ್ಯೆ ಯಾರಿಗೂ ಕಾಣುವುದಿಲ್ಲ. ಗ್ಯಾಸ್ ಸಮಸ್ಯೆಯಿಂದ ಇಷ್ಟೊಂದು ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ, ಸಂಸದರು ನಮ್ಮ ಸಮಸ್ಯೆಯನ್ನ ಸರಿಪಡಿಸಬೇಕು. ಪಂಪ್ಗಳಲ್ಲಿ ಗ್ಯಾಸ್ ಖಾಲಿಯಾಗಿದ್ದು, ದುಡಿಮೆ ಇಲ್ಲದಂತೆ ಆಗಿದೆ.
ವಿದ್ಯೆ ಕಲಿಯಲು ಬರುವ ಪವಿತ್ರ ತಾಣಗಳು ಇಂದು ರಣರಂಗವಾಗುತ್ತಿವೆ. ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜಿನಲ್ಲಿ (P.A. College) ಪ್ರತಿ ತಿಂಗಳು ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು.
ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಡುತ್ತದೆ.
ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕಂಬಳಪದವು ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.