Showing 20 of 4469 posts • Page 48 of 224
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.
ಜನಸೇವೆಯ ನಿಜವಾದ ಅರ್ಥವನ್ನು ಜೀವನದಲ್ಲಿ ತೋರಿಸುವ ನಾಯಕರು ವಿರಳ. ಆದರೆ ಅಂತಹ ಅಪರೂಪದ ನಾಯಕತ್ವದ ಜೀವಂತ ರೂಪವಾಗಿ ಹೊರಹೊಮ್ಮಿರುವವರು ಯು.ಟಿ.ಖಾದರ್ ಅವರ ನಾಯಕತ್ವವು ಕೇವಲ ರಾಜಕೀಯದ ಮಿತಿಗಳಲ್ಲಿ ಸೀಮಿತವಾಗಿಲ್ಲ, ಅದು ಮಾನವೀಯತೆ, ಕಾಳಜಿ, ನಿಷ್ಠೆ ಮತ್ತು ನಿಜವಾದ ಸೇವಾಭಾವದ ಮಹಾನ್ ಸಂಕೇತವಾಗಿದೆ.
ಕ್ರೈಸ್ತ ಧರ್ಮದ ಅತ್ಯಂತ ಪವಿತ್ರ ಹಾಗೂ ಶೋಕದ ದಿನವಾದ ‘ಶುಭ ಶುಕ್ರವಾರ’ವನ್ನು (ಗುಡ್ ಫ್ರೈಡೇ) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಇಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತಿದೆ. ಈ ವರ್ಷದ ಆಚರಣೆಯು ವಿಶೇಷವಾಗಿ “ಮಕ್ಕಳ ವರ್ಷ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿದ್ದು, ಚರ್ಚ್ಗಳ ವಿವಿಧ ವಿಧಿವಿಧಾನಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ.
ನನ್ನ ಮಗಳ ವಿಚಾರದಲ್ಲಿ ನ್ಯಾಯ ಕೊಡಿಸದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ ಎಂದು ಸಂತ್ರಸ್ತೆ ತಾಯಿ ನಮಿತಾ ಸ್ಫೋಟಕ ಹೇಳಿಕೆಯನ್ನ ನೀಡಿದ್ದಾರೆ.
ಮೀನು ಹಿಡಿಯಲೆಂದು ಫಲ್ಗುಣಿ ನದಿಗೆ ಸಣ್ಣ ದೋಣಿಯಲ್ಲಿ ತೆರಳಿದ್ದ ಮೂವರು ಯುವಕರಲ್ಲಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಕುಂಜತ್ಬೈಲಿನಲ್ಲಿ ನಡೆದಿದೆ.
ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಸಕ ಹರೀಶ್ ಪೂಂಜಾ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.
ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ ಅರ್ಧಕ್ಕರ್ಧ ನಿಂತು ಹೋಗಿದೆ.
ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯಲ್ ಡೆಮೊಕ್ರಾಟಿಕ್ ಟ್ರೇಡ್ ಯೂನಿಯನ್ (ಎಸ್ಬಿಟಿಯು) ಸರಕಾರವನ್ನು ಒತ್ತಾಯಿಸಿದೆ.
ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣದಲ್ಲಿ ಈತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಮೃತನ ಪೋಷಕರು ಗಂಭೀರ ಆರೋಪ ಮಾಡುತ್ತಿರುವ ಬೆನ್ನಲ್ಲೇ ತಾನೂ ಕೂಡ ಅದೇ ಯುವತಿಯಿಂದಾಗಿ ಮೋಸ ಹೋಗಿದ್ದಾಗಿ ಯುವಕನೋರ್ವ ಮುಂದೆ ಬಂದಿದ್ದಾನೆ.
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಬ್ರಹ್ಮಾವರ ಇವರ ವತಿಯಿಂದ ಮಟಪಾಡಿ ಪ್ರೀಮಿಯರ್ ಲೀಗ್ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಜರುಗಿತು.
ಕಲಾಕೃತಿ ಗಳಿಂದ ಅಲಂಕೃತವಾದ ಏರ್ ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ ವಿಮಾನ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮೂಲದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿರುವ ಘಟನೆ ನಡೆದಿದೆ.
2026 ರ ಜನಗಣತಿ ಪ್ರಕ್ರಿಯೆಯಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ, ನಿಖರ ಮತ್ತು ಸಮಗ್ರ ದತ್ತಾಂಶ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾಹಿತಿ ನೀಡಿದ್ದಾರೆ.
: ‘ನಮ್ಮ ಮಗನ ಸಾವಿಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವಿಗೀಡಾಗಿರುವ ಸುದೀಪ್ ರೈ ಅವರ ಪೋಷಕರು ಆಗ್ರಹಿಸಿದ್ದಾರೆ.
ಜಿಎಸ್ಬಿ ಸಮಾಜ ಹಿತ ರಕ್ಷಣಾ ವೇದಿಕೆ ಸಮಾಜದ ಹಿರಿಯರಿಗಾಗಿ ನಿರ್ಮಿಸುತ್ತಿರುವ ವಯೋವಂದನ ಆತಿಥ್ಯ ಗೃಹ ಮಕ್ಕಳಿಲ್ಲದ ಹಿರಿಯರಿಗೆ ಜೀವನದ ಸಂಧ್ಯಾಕಾಲದಲ್ಲಿ ಆಸರೆಯಾಗಿ ಚೈತನ್ಯದಾಯಿಯಾಗಲಿದೆ.
ಇರಾನ್-ಇಸ್ರೇಲ್- ಅಮೆರಿಕಾದ ನಡುವಿನ ಯುದ್ಧದ ಹೊಡೆತ ಮಂಗಳೂರಿನ ರಿಕ್ಷಾ ಚಾಲಕರಿಗೂ ತಟ್ಟಿದೆ. ಮಂಗಳೂರು ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಅಟೋ ಎಲ್ಪಿಜಿ ಖಾಲಿಯಾಗಿರುವುದರಿಂದ ಆಟೋ ರಿಕ್ಷಾ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಪ್ರಮುಖ ಬಂಕ್ಗಳಲ್ಲಿ ಇಂಧನ ಲಭ್ಯವಿಲ್ಲದ ಕಾರಣ, ಅನಿಲ ಇರುವ ಬೆರಳೆಣಿಕೆಯ ಬಂಕ್ಗಳ ಮುಂದೆ ಆಟೋಗಳ ಸುದೀರ್ಘ ಸಾಲು ಕಂಡುಬರುತ್ತಿದೆ.
ಉರ್ವಾ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿದ್ದ, ಸುಹಾನ್ @ ಸೋನು (33) ತಂದೆ: ದಿ ಸೋಮಯ್ಯ ವಾಸ: ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಈತನು ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಆತನ ವಿರುದ್ದ ಉರ್ವಾ ಪೊಲೀಸ್ ಠಾಣಾ ಪ್ರಕರಣದಲ್ಲಿ ಘನ ನ್ಯಾಯಾಲವವು LPC ವಾರಂಟ್ ಹೊರಡಿಸಿರುತ್ತದೆ.