Showing 20 of 4118 posts • Page 49 of 206
1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಿಡಿದ ವಿಚಾರವಾಗಿ ಮಾಜಿ ಸಚಿವ ರಮಾನಾಥ್ ರೈ ಹೇಳಿಕೆ ವ್ಯೆರಲ್ ಹಿನ್ನಲೆಯಿಂದ ರಮಾನಾಥ್ ರೈ ಅವರು ಸ್ಪಷ್ಟಿಕರಣ ನೀಡಿದ್ದಾರೆ.
ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಜಡ್ಜ್ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.
ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಭಾರತೀಯ ವೈದ್ಯ ಪದ್ಧತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಆದ್ಯತೆ ನೀಡಲಾಗಿದೆ, ಶಾಸ್ತ್ರೀಯ ಹಾಗೂ ವೈಜ್ಞಾನಿಕ ಆಯುಷ್ ಪದ್ಧತಿಗಳ ಉನ್ನತ ಮೌಲ್ಯಗಳ ಸಂಗಮ ಆಯುಷ್ ಹಬ್ಬದಲ್ಲಿ ಮೂಡಿಬರಲಿದೆ.
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.
ಮಂಗಳೂರು ಪತ್ರಿಕಾಗೋಷ್ಠಿಯಲ್ಲಿ ಸಂಘಟಕರಾದ ವಸಂತ್ ಕುಮಾರ್ ಶೆಟ್ಟಿ ಮಾತನಾಡಿ , ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ಧಿಮಾಂದ್ಯತೆ, ಆಟಿಸಂ, ಮೆದುಳಿನ ಪಾತ್ರ ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಪ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಿವಾಸಿ ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ದೂರು ನೀಡಿದ್ದರು. ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ಭಾಷಣ ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ […]
ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ಅಡ್ಯಾರ್ ಕಟ್ಟೆ ಬಳಿ ಮಂಗಳವಾರ ನಡೆದಿದೆ.
ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದನ್ನು ರಮಾನಾಥ್ ರೈ ಖಂಡಿಸಿದ್ದಾರೆ.
ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ.
ಫೇಸ್ಬುಕ್ನಲ್ಲಿ ಪ್ರಸಾರವಾದ ಆಕ್ಷೇಪಾರ್ಹ ವಿಡಿಯೋದ ವಿರುದ್ಧ ಖ್ಯಾತ ಸಾಮಾಜಿಕ ಕಾರ್ಯಕರ್ತ ಮತ್ತು ವಿಚಾರವಾದಿ ನರೇಂದ್ರ ನಾಯಕ್ ಉರ್ವಾ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾರೆ.
ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.
ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳನ್ನೊಳಗೊಂಡ ಅರ್ಕುಳ ವಸತಿಯ ವತಿಯಿಂದ 18 ಜನವರಿ 2026, ಆದಿತ್ಯವಾರ ಅರ್ಕುಳದಲ್ಲಿ ಹಿಂದೂ ಸಂಗಮ ಸಮಾವೇಶ ಅತ್ಯಂತ ಶಿಸ್ತಿನೊಂದಿಗೆ ಹಾಗೂ ಅದ್ಧೂರಿಯಾಗಿ ನಡೆಯಿತು.
ಬೋಳಾರ, ಹೊಯ್ಗೆ ಬಝಾರ್ ನ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ವಾಗಿದ್ದು ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ .
ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಲೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.
ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ ಮಹಿಳೆಗೆ ವ್ಯಕ್ತಿಯೊಬ್ಬ ಬೀಯರ್ ಬಾಟಲಿಯಲ್ಲಿ ಹಲ್ಲೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದರೂ ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಕಳೆದ ಅಕ್ಟೋಬರ್ನಿಂದ ಎಂಸಿಎಫ್ ಕಾರ್ಖಾನೆಯ ಹೆಸರು ಮಾಯವಾಗಿದೆ. ‘ಎಂಸಿಎಫ್’ ಎಂಬ ಐತಿಹಾಸಿಕ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು.