Showing 20 of 4471 posts • Page 50 of 224
ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30 ರಿಂದ ಏಪ್ರಿಲ್ 6 ವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ.
ಸಂತ ಜೋಸೆಫರ ದೇವಾಲಯ, ಕಳವಾರು, ಪೆಜಾರ್ ಇಲ್ಲಿ ಸುಮಾರು ಎರಡುವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ವರ್ಷ 242 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿಯನ್ನು ನಡೆಸಲಾಗುತ್ತದೆ. 2026 ನೇ ಸಾಲಿನ ಶಿಲುಬೆಯ ಹಾದಿ ಕಾರ್ಯಕ್ರಮ ಮಾರ್ಚ್ 31 ರಂದು ಮಂಗಳವಾರ ಸಂಜೆ 5 ಗಂಟೆಗೆ ನಡೆಯಲಿದೆ.
ತೊಕ್ಕೊಟ್ಟು ಫೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಮತ್ತು ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ ಮಂಗಳೂರು ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ಕಳೆದ ವರ್ಷ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.
ಜಂಕ್ಷನ್-ಸೂರತ್ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಖಾಯಂಗೊಳಿಸಲು ರೈಲ್ವೇ ಸಚಿವಾಲಯ ಒಪ್ಪಿಗೆ ನೀಡಿದೆ. ರೈಲಿನ ಸಂಖ್ಯೆಯೂ ಬದಲಾಗಲಿದ್ದು, ನಂ. 19057 ಸೂರತ್ ಮಂಗಳೂರು ಎಕ್ಸ್ ಪ್ರೆಸ್ ಬುಧವಾರ, ರವಿವಾರ ರಾತ್ರಿ 7.35ಕ್ಕೆ ಸೂರತ್ನಿಂದ ಹೊರಡಲಿದ್ದು, ಗುರುವಾರ, ಸೋಮವಾರ ಮಂಗಳೂರು ತಲಪಲಿದೆ.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್ ಎಚ್ ವೈ ಎಂಬ ವ್ಯಕ್ತಿಗೆ ಜಾಮೀನು ಮಂಜೂರಾಗಿದೆ.
ದಕ್ಷಿಣ ಕನ್ನಡ ಮೋಟಾರ್ ಸ್ಪೋರ್ಟ್ಸ್ ಇತಿಹಾಸದಲ್ಲೇ ಮಹತ್ವದ ಕ್ಷಣಕ್ಕೆ ವೇದಿಕೆ ಸಜ್ಜಾಗಿದೆ. ಐಎಂಎಸ್ಸಿ. ಮೋಟಾರ್ ಸ್ಪೋರ್ಟ್ಸ್ನ 25ನೇ ವರ್ಷದ ಸಂಭ್ರಮದ ಅಂಗವಾಗಿ 400ನೇ ಸ್ಪರ್ಧೆಯಾಗಿ ಪ್ರತಿಷ್ಠಿತ ಐಎಂಎನ್ಸಿ ಆಫ್ ರೋಡ್ ಟ್ರೋಪಿ 2020ನ್ನು ಮಾ.28, 29ರಂದು ಮಂಗಳೂರು ಸಮೀಪದ ಒಡ್ದುರು ಫಾರ್ಮ್ಸ್ನಲ್ಲಿ ಆಯೋಜಿಸಿದೆ.
ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ನಡೆದಿದೆ.
ಇಂಧನ ಭದ್ರತೆಗೆ ಹೆಚ್ಚಿನ ಬಲ ತುಂಬಲು, ಗುಜರಾತ್ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ (Apollo Ocean) ಎಂಬ ಬೃಹತ್ ಎಲ್ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪ ನಡೆದಿದೆ.
ಮಂಗಳೂರಿನ ಜ್ಯುವೆಲ್ಲರಿ ಶಾಪ್ ಮಾಲೀಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರಸಿದ್ಧ ‘ಶುಭಾಂಗಿ ಜ್ಯುವೆಲ್ಲರ್ಸ್’ ಅಂಗಡಿಗೆ ಸ್ವಾಮೀಜಿ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ, ಮಾಲೀಕರನ್ನು ನಂಬಿಸಿ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ದೋಚಿ ಪರಾರಿಯಾಗಿದ್ದಾನೆ.
ದೇಶದಾದ್ಯಂತ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಪಿವಿ (HPV) ಲಸಿಕ ಅಭಿಯಾನ ದ.ಕ ಜಿಲ್ಲೆಯಲ್ಲೂ ಮಾರ್ಚ್ ನಿಂದ ಮೇ ತಿಂಗಳವರೆಗೆ ನಡೆಯಲಿದೆ.
ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕಾರ್ಯಕ್ರಮ ನೆರವೇರಿಸಿದೆ.
ಉಳ್ಳಾಲದ ಸಜೀಪ ಪಡು ತಲೆಮೊಗರು ಮಸೀದಿ ಬಳಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದ್ದರೆ, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ.
ಕಳೆದ 2025ರ ಅಕ್ಟೋಬರ್ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಂಡ ಬಳಿಕ ರಶ್ಯದ ತೈಲ ಟ್ಯಾಂಕರ್ ವೊಂದು ರವಿವಾರ ಮಂಗಳೂರು ತಲುಪಿದೆ.