Showing 20 of 4471 posts • Page 51 of 224
ಕರಾವಳಿಯ ಜನರ ನಿದ್ದೆಗೆಡಿಸಿದ್ದ ಈ ಹಾರರ್ ಸಿನೆಮಾ ಮಾದರಿಯ ಘಟನೆಯ ಹಿಂದೆ ಇದ್ದದ್ದು ಯಾವುದೇ ಪ್ರೇತಾತ್ಮವಲ್ಲ, ಬದಲಾಗಿ ಒಬ್ಬ ‘ಅತೀ ಬುದ್ದಿವಂತ’ ಗೆಳೆಯ ಹೂಡಿದ ಸ್ಕೆಚ್ ಆಗಿದೆ.
ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆದಿತ್ಯವಾರದಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿದ್ದಾರೆ.
ನಿಗೂಢ ಕಾರಣಕ್ಕೆ ಯುವ ಉದ್ಯಮಿಯೊಬ್ಬ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಗೂನಡ್ಕದಲ್ಲಿ ನಡೆದಿದೆ.
ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ.
ಕೊಲೆಯತ್ನ, ದರೋಡೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ISO ಪ್ರಮಾಣೀಕರಣ ಹೊಂದಿರುವ ಮತ್ತು 163 ವರ್ಷಗಳ ವಿಶ್ವಾಸಾರ್ಹ ಸಂಪ್ರದಾಯ ಹೊಂದಿರುವ ಆಭರಣ ಸಮೂಹ ಬಾಬಿ ಚೆಮ್ಮನೂರು ಇಂಟರ್ನ್ಯಾಷನಲ್ ಜ್ಯುವೆಲ್ಲರ್ಸ್, ಕರ್ನಾಟಕದ ಮಂಗಳೂರಿನಲ್ಲಿ ತನ್ನ ಹೊಸ ಶೋರೂಮ್ ಅನ್ನು ತೆರೆಯುತ್ತಿದೆ. ಈ ಶೋರೂಮ್ ಅನ್ನು ಮಾರ್ಚ್ 22 ರ ಭಾನುವಾರ ಸಂಜೆ 5 ಗಂಟೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ.
ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದರಲ್ಲಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನೊಬ್ಬನ ವಿರುದ್ಧ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಸಿದ್ಧ ಸಾಹಿತ್ಯಕರ್ತ ಶ್ರೀ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ ಬೆಳಗ್ಗೆ 10:00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.
ಪಣಂಬೂರು ಪೊಲೀಸರಿಂದ 18.03.2020ರಂದು ಮಹತ್ವದ ದಾಳಿ ನಡೆಸಿದ್ದು, 9 ಗೋವಿನ ರಕ್ಷಣೆ ಮತ್ತು ನೂರಾರು ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಆಟ-ಕೂಟಗಳ ಸರದಾರ, ಯಕ್ಷರಂಗದ ಸವ್ಯಸಾಚಿ ಸೂರಿಕುಮೇರು ಗೋವಿಂದ ಭಟ್ (88) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ನಿಧನಹೊಂದಿದರು. ಅವರು ಮೂವರು ಪುತ್ರರನ್ನು ಅಗಲಿದ್ದಾರೆ.
ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಪ್ರತಿಭೆ ಮತ್ತು ಸಾಧನೆಗಳನ್ನು ಗುರುತಿಸಿ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರನ್ನು 2026 ರ ಪ್ರತಿಷ್ಠಿತ ಫುಡಾರ್ ಪ್ರತಿಷ್ಠಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ‘ಹಾನಿ ಹ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್ನೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. […]
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ನಾಡಿನ ಸಮಸ್ತ ಜನರಿಗೆ ಸ್ಪೀಕರ್ ಯು ಟಿ ಖಾದರ್ ಅವರು ಈದುಲ್ ಫಿತ್ ಹಬ್ಬದ ಶುಭಾಶಯ ಕೋರಿದ್ದಾರೆ.
ಪವಿತ್ರ ರಮಝಾನ್ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್’ ಆಚರಿಸಿದರು.
ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿಯ ಶಾಪ್ ಬಳಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಂಗಡಿಯ ಹೊರಗಡೆ ಇಟ್ಟಿದ್ದ ಟೇಬಲ್ ಫ್ಯಾನ್ ನನ್ನು ವ್ಯಕ್ತಿ ಕದಿಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಮ್ಮ ಕರಾವಳಿಯ ಮಂಗಳೂರು ಪ್ರತಿಭೆಗಳ ಗಣಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳೂರಿನ ಶಕ್ತಿನಗರದ ನಿವಾಸಿ ಆದಿ ಸ್ವರೂಪ ತನ್ನ ಅಸಾಧಾರಣ ಬರವಣಿಗೆಯ ಕೌಶಲದಿಂದ ಇಡೀ ದೇಶದ ಗಮನ ಸೆಳೆಯುತ್ತಿದ್ದಾಳೆ.