Showing 20 of 4473 posts • Page 53 of 224
ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಆರೋಪ ಮಾಡಿದ್ದ ಸುಮತಿ ನಾಯ್ಕ ವಿರುದ್ಧವೇ ಆರೋಪ ಕೇಳಿಬಂದಿದೆ. ಸುಮತಿ ನಾಯ್ಕ ನಮ್ಮ ಕುಟುಂಬದ ಮಾನ ಮರ್ಯಾದೆ ತೆಗಿದಿದ್ದಾಳೆ.
ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ.
ಇಸ್ರೇಲ್ ಇರಾನ್ ಯುದ್ಧದಿಂದಾಗಿ ಮಂಗಳೂರು ಮತ್ತು ಗಲ್ಫ್ ಬಹುತೇಕ ರಾಷ್ಟ್ರ ಗಳೊಂದಿಗೆ ವಿಮಾನ ಸಂಚಾರ ರದ್ದುಗೊಂಡಿದ್ದರೂ ಮಂಗಳೂರು ಮತ್ತು ಮಸ್ಕತ್ ನಡುವಿನ ವಿಮಾನ ಯಾನ ಮುಂದುವರಿದಿದೆ.
ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ.
ಶ್ರೀಕ್ಷೇತ್ರ ಪೊಳಲಿಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್ (78) ನಿಧನರಾಗಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಸುಮಾರು 50 ವರ್ಷಕ್ಕೂ ಮೇಲ್ಪಟ್ಟು ಅರ್ಚಕ ಸೇವೆ ಮಾಡಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026- 28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವು ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಿತು.
ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ನಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪ್ರೆನ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಸಮಗ್ರ ಮಾಹಿತಿ ನೀಡಿದರು.
ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಶುಕ್ರವಾರ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಯಮರೂಪಿಯಾಗಿ ಬಂದ ಬಸ್ ಇವರ ಬದುಕನ್ನು ಬಲಿಪಡೆದಿದೆ.
ಕರಾವಳಿ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಬೆಂಗಳೂರು-ಮಂಗಳೂರು ನಡುವಿನ ವೇಗದ ರೈಲು ಸಂಚಾರದ ಕನಸಿಗೆ ಈಗ ‘ವಂದೇ ಭಾರತ್’ ರೂಪದಲ್ಲಿ ಹೊಸ ಆಯಾಮ ಸಿಕ್ಕಿತ್ತು. ಆದರೆ, ಇತ್ತೀಚೆಗೆ ದಕ್ಷಿಣ ಪಶ್ಚಿಮ ರೈಲ್ವೆ ಬಿಡುಗಡೆ ಮಾಡಿರುವ ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲಿನ ಪ್ರಸ್ತಾವಿತ ವೇಳಾಪಟ್ಟಿ ಕರಾವಳಿ ಜನರಲ್ಲಿ ಅತೀವ ನಿರಾಸೆ ಮತ್ತು ಆಕ್ರೋಶವನ್ನು ಮೂಡಿಸಿದೆ.
ಇದೇ ಬರುವ ಮಾರ್ಚ್ 20 ನೇ ತಾರೀಕಿನಂದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು.
ಹೊಸಬೆಟ್ಟು ಪರಿಸರದ ಗ್ಯಾರೇಜ್ ಒಂದರ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಿದ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಬಳಸಿದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿರುವ ‘ಜೆಫ್ರಿ ಎಪ್ಸ್ಟೀನ್’ ಪ್ರಕರಣದ ಕಡತಗಳಿಗೂ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮೌನಕ್ಕೂ ನಂಟಿದೆಯೇ? ಎಂಬ ಅನುಮಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವ್ಯಕ್ತಪಡಿಸಿದ್ದಾರೆ.
ಕೆಂಪು ಬಾಕ್ಸೈಟ್ ತುಂಬಿಕೊಂಡು ಬರುತ್ತಿದ್ದ ಲಾರಿ ಗುರುಪುರ ಜಂಕ್ಷನ್ನಲ್ಲಿ ನಿಯಂತ್ರಣ ತಪ್ಪಿ ಮಿನಿ ಬಜಾರ್ ಬೇಕರಿ ಹಾಗೂ ಸಮೀಪದ ಮೊಬೈಲ್ ಅಂಗಡಿಗೆ ಗುದ್ದಿದ ಘಟನೆ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರಮುಖ ದೇವಸ್ಥಾನಗಳಲ್ಲಿ ಈಗ ಅಡುಗೆ ಅನಿಲದ (LPG) ಅವಲಂಬನೆ ಕಡಿಮೆಯಾಗುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಇತ್ತೀಚಿನ ಪೂರೈಕೆಯ ವ್ಯತ್ಯಯದ ಹಿನ್ನೆಲೆಯಲ್ಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗಳು ಮತ್ತೆ ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಬಳಕೆಗೆ ಮುಂದಾಗಿವೆ.
“ಕಾಂಗ್ರೆಸ್ ಕಾಲದಲ್ಲಿ 10 ರೂ. ಗ್ಯಾಸ್ ಬೆಲೆ ಏರಿಕೆಯಾದಾಗ ಬೀದಿಗಿಳಿದು ಒಲೆ ಹಚ್ಚಿ ಚಹಾ ಮಾಡುತ್ತಿದ್ದ ಸಚಿವೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ? ಈಗ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗಿದ್ದರೂ ಅವರ ಅಡ್ರೆಸ್ಸೇ ಇಲ್ಲ. ಜಿಲ್ಲೆಯ ಸಂಸದರು ಮತ್ತು ಬಿಜೆಪಿ ಶಾಸಕರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ” ಎಂದು ಹರೀಶ್ ಕುಮಾರ್ ವ್ಯಂಗ್ಯವಾಡಿದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಷ್ಠಿತ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಾದಸ್ವರ ಕಲಾವಿದ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅವರಿಗೆ ಮಂಗಳೂರಿನಲ್ಲಿ ಸನ್ಮಾನ ನಡೆಯಲಿದೆ.
ಎಂಡೋಮೆಟ್ರಿಯೊಸಿಸ್ ಜಾಗೃತಿ ಮಾಸದ ಅಂಗವಾಗಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಡೋಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರಿಗೆ ಅಪರೂಪದ ಮಿನಿಮಲ್ ಇನ್ವೇಸಿವ್ (ಲ್ಯಾಪರೋಸ್ಕೋಪಿಕ್) ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿದ್ದಾರೆ.