Showing 20 of 4475 posts • Page 55 of 224
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಇಬ್ಬರು ವ್ಯಕ್ತಿಗಳ ವಿರುದ್ಧ FIR ದಾಖಲಿಸಿದ್ದಾರೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನಿಶ್ಚಿತತೆಯ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಮಂಗಳೂರು – ಜಿದ್ದಾ, ಮಂಗಳೂರು- ದುಬೈ ವಿಮಾನಗಳ ಮಾ.9ರ ಯಾನ ರದ್ದಾಗಿದೆ.
ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ.
ಕ್ರೈಸ್ತ ವಂಶಾವಳಿ ತಿಳಿಯಲು ಚರ್ಚ್ ದಾಖಲೆ ನೋಡಿದರೆ ಸಾಕು ಆದರೆ ಅದೊಂದು ಕುತೂಹಲ ತಣಿಸುವ ಕೆಲಸ ಬಿಟ್ಟರೆ ಬೇರೆ ಹೆಚ್ಚಿನ ಉಪಯೋಗ ಕಾಣಿಸುವುದಿಲ್ಲ, ಎಂದು ವಂಶಾವಳಿಗಳು ಹುಡುಕಿ ಹತ್ತುಸಾವಿರ ಪುಟಗಳ ಪುಸ್ತಕ ಬರೆದು ಪ್ರಕಟ ಮಾಡಿದ ಮತ್ತು ಅದಕ್ಕಾಗಿ ವಿದೇಶಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪಡೆದ ವಂಶಾವಳಿ ತಜ್ಞ ಡಾ ಮೈಕಲ್ ಲೋಬೊ ಹೇಳಿದರು.
ನವಮಂಗಳೂರು ಬಂದರು ಪ್ರಾಧಿಕಾರವು ಇಂದು ಪ್ರಸ್ತುತ ಕ್ರೂಸ್ ಋತುವಿನ ಮೂರನೇ ಕ್ರೂಸ್ ಹಡಗು ಎಂಎಸ್ ಸಿರೆನಾವನ್ನು ಸ್ವಾಗತಿಸಿತು, ಇದು ಈ ಪ್ರದೇಶದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ.
ಕೂಡಿಬೈಲು ಕಂಬಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಚಿವ ಬಿ. ರಮಾನಾಥ್ ರೈ ಅವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ವಿಶೇಷವಾಗಿ ಶ್ಲಾಘಿಸಿದರು.
ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಶೀಟರ್ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಲಾಗಿದೆ.
ಅಂತರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಏರ್ಪಡಿಸಿದ ಸೀರೆ ಓಟದಲ್ಲಿ ಸಾಮಾಜಿಕ ಕಟ್ಟಳೆಗಳನ್ನೂ ಮೀರಿ ಮಹಿಳೆಯರು ಓಡಿದರು. ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ಸೀರೆ ಓಟದಲ್ಲಿ ಸುಮಾರು 5000 ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ರು ಸ್ಫರ್ಧೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಉಲ್ಬಣಗೊಳ್ಳುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದ ಪಶ್ಚಿಮ ಏಷ್ಯಾದ ವಾಯುಪ್ರದೇಶದಲ್ಲಿ ನಡೆಯುತ್ತಿರುವ ಅಡೆತಡೆಗಳನ್ನು ಉಲ್ಲೇಖಿಸಿ ಮಾರ್ಚ್ 7 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತನ್ನ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.
ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ಆಶ್ರಯದಲ್ಲಿ ನಡೆಯುವ 2026 ನೇ ಸಾಲಿನ ಪ್ರತಿಷ್ಠಿತ ʼಸಮಾಜ ಸೇವಾ ರತ್ನʼ ಪ್ರಶಸ್ತಿಗೆ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಾರ್ಚ್ 11ರಂದು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಯುಗಪುರುಷ, ಎಲ್ಲಾ ಯುಗಗಳ ಋಷಿ ಪೂಜ್ಯ ಗುರುದೇವ್ ಸ್ವಾಮಿ ಚಿನ್ಮಯಾನಂದ ಅವರ ನೇತೃತ್ವದಲ್ಲಿ, ಚಿನ್ಮಯ ಚಳುವಳಿಯು ಜಗತ್ತನ್ನು ವೇದಾಂತದ ಕಾಲಾತೀತ ಬೆಳಕಿಗೆ ಜಾಗೃತಗೊಳಿಸಿತು.
ಇರಾನ್- ಅಮೆರಿಕ, ಇಸ್ರೇಲ್ ಯುದ್ಧ ಮುಂದುವರಿಯುವ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ ಏಕೈಕ ತೈಲ ಸಂಸ್ಕರಣಾಗಾರ ಎಂಆರ್ಪಿಎಲ್ನಲ್ಲೂ ಸ್ವಲ್ಪ ಮಟ್ಟಿನ ಕಳವಳ ಉಂಟಾಗಿದೆ. ಯುದ್ಧ ಸನ್ನಿವೇಶ ಇನ್ನೂ ಒಂದು ತಿಂಗಳ ಕಾಲ ಇರಬಹುದು ಎಂದು ಅಮೆರಿಕದ ಅಧ್ಯಕ್ಷ ಟ್ರಂಪ್ ಹೇಳಿರುವುದು ಆತಂಕ ತಂದಿದೆ.
ಮೂಲ್ಕಿ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿ ನಡೆದಿದ್ದ ಕೊಲೆ ಪ್ರಕರಣ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ತೀರ್ಪು ನೀಡಿದ್ದಾರೆ.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ 5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ನಗರದ ಶೈಕ್ಷಣಿಕ ವಲಯ ಹಾಗೂ ಯುವ ಸಮೂಹವನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣಾ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅರು ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸಿದ್ದು, ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.