Showing 20 of 4475 posts • Page 56 of 224
ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ಮಹಿಳೆಯರ ಬದುಕು ದುಸ್ತರವಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಗುರುವಾರ ಮಧ್ಯಾಹ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದೆ.
ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯಲ್ಲಿರುವ ನೇತ್ರಾವತಿ ನದಿ ತಟದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ಗಳು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಶಾಕ್ ಆಗಿದ್ದಾರೆ. ಆಧಾರ್ ಕಾರ್ಡ್ಗಳ ರಾಶಿ ಕಂಡ ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
“ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸರ್ವಧರ್ಮೀಯರ ಭಾವೈಕ್ಯತೆಯ ಹಬ್ಬಗಳ ಆಚರಣೆಯ ಅಂಗವಾಗಿ, ಈ ವರ್ಷ 11ನೇ ವರ್ಷದ ರಂಝಾನ್ ಇಫ್ತಾರ್ ಸೌಹಾರ್ದ ಕೂಟವನ್ನು ಮಾರ್ಚ್ 7ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕಾರ್ಪೋರೇಟರ್ ಜೆ. ನಾಗೇಂದ್ರ ಕುಮಾರ್ ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ.
ವಿಶ್ವ ಬೊಜ್ಜು ದಿನದ ಅಂಗವಾಗಿ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಸಮಗ್ರ ಮತ್ತು ವೈದ್ಯರ ನೇತೃತ್ವದ ಜೀವನಶೈಲಿ ಕೇಂದ್ರಿತ ಕ್ಲಿನಿಕ್ KLICK- – KMC Lifestyle & Integrated Care KLICK ನ್ನು ಮಾರ್ಚ್ 4 ರಂದು ಆರಂಭಿಸಿದೆ.
ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸುತ್ತಿರುವ “ಕ್ರೆಡಿಟ್ ರಾಜಕಾರಣ” ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳೂರು : ಮದ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ನಡುವೆ ಆಕಾಶದಲ್ಲಿ ಯಾವುದೇ ವಸ್ತು ಹಾರಾಡಿದರೂ,ಭಯ ,ಗೊಂದಲ ಮೂಡೋದು ಸಹಜ. ಅಂತಹ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಏಕಾಏಕಿ ದೊಡ್ಡ ಗಾತ್ರದ ದ್ರೋಣ್ ಒಂದು ಆಕಾಶದ ತುಂಬೆಲ್ಲಾ ಹಾರಾಡಿದಾಗ ಜನ ಆತಂಕ ಪಡೋದು ಸಾಮಾನ್ಯವೇ.
ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಪ್ರಚೋದನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ ‘ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್’ (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸಕರಾಗಿ ಆಹ್ವಾನಿತರಾಗಿದ್ದರು.
ಜೈನ ಧರ್ಮವು ಧಾರ್ಮಿಕ ಸಹಿಷ್ಣುತೆ, ಆತ್ಮಶುದ್ಧಿ ಮತ್ತು ತಪಸ್ಸಿನ ಮೂಲಕ ಮೋಕ್ಷಪ್ರಾಪ್ತಿಯ ಮಾರ್ಗವನ್ನು ತೋರಿಸುತ್ತದೆ. ಅಹಿಂಸೆಯ ಪರಮತತ್ವವು ಭಾರತೀಯ ಸಂಸ್ಕೃತಿಯ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸಿದೆ.
ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಂದ್ರ ಗ್ರಹಣ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದ ಬಾಗಿಲು ಬಂದ್ ಮಾಡಲಾಗಿದೆ. ಮಂಜುನಾಥ ಸ್ವಾಮಿಗೆ ಮಹಾಪೂಜೆ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ 1.30ರವರೆಗಷ್ಟೇ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಕಾರ್ ಸ್ಟ್ರೀಟ್ನ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಎಂ. ಸತೀಶ್ ಪ್ರಭು ಅವರು ಇಂದು ನಿಧನರಾದರು
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಣ ವಿಮಾನ ಸಂಚಾರವನ್ನು ಮಾ. 4ರ ವರೆಗೆ ರದ್ದು ಮಾಡಲಾಗಿದೆ.
ನಗರದ ಕೂಳೂರಿನ ಕಿಟ್ಟ ಮೊಗೇರ ವೇದಿಕೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಶ್ರೀ ವಿನೋದ ಕುಮಾರ್ ಎಂ. ಅವರು ಅಮೋಘ ಸಾಧನೆ ಮಾಡಿದ್ದಾರೆ.
ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್ಸ್ಟಾಗ್ರಾಮ್ ಪೇಜ್ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಲ್ಫ್ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾರ್ಚ್ 3 ರಂದು ದುಬೈ, ದೋಹಾ, ದಮ್ಮಾಮ್, ಕತಾರ್ ಮತ್ತು ಅಬುಧಾಬಿಗೆ ತೆರಳಬೇಕಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.