Showing 20 of 4475 posts • Page 57 of 224
ನೇತ್ರಾವತಿ ಸೇತುವೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಧರ್ಮಕ್ಷೇತ್ರದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಬಯಲು ಮೈದಾನದಲ್ಲಿ ನಡೆಯುತ್ತಿದ್ದ ನಾಲ್ಕು ದಿನಗಳ ‘ಬೃಹತ್ ಬೈಬಲ್ ಅಧಿವೇಶನ 2026’ ಭಾನುವಾರ (ಮಾರ್ಚ್ 1) ಅತೀವ ಭಕ್ತಿಭಾವದಿಂದ ಸಂಪನ್ನಗೊಂಡಿತು.
ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್ ರದ್ದುಗೊಳಿಸಲಾಗಿದೆ.
ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,
ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯಡಿ, ಮುಂದಿನ 5 ವರ್ಷದಲ್ಲಿ ಮಂಗಳೂರನ್ನು ದೇಶದ ಪ್ರಮುಖ ಉದ್ದಿಮೆ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಹಮ್ಮಿಕೊಂಡಿರುವ ‘ಬೊಲ್ಪು – ಅವಕಾಶ ನವೋದಯʼ ಯೋಜನೆಯು ಇದೀಗ ಮಹತ್ವದ ಘಟ್ಟ ತಲುಪಿದೆ.
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ.
ಮಂಗಳೂರು ಧರ್ಮಕ್ಷೇತ್ರದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಕರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ಮೈದಾನದಲ್ಲಿ ನಡೆಯುತ್ತಿರುವ ‘ಬೃಹತ್ ಬೈಬಲ್ ಅಧಿವೇಶನ 2026’ರ ಎರಡನೇ ದಿನವಾದ ಶುಕ್ರವಾರ (ಫೆ. 27) ಸಹಸ್ರಾರು ವಿಶ್ವಾಸಿಗಳು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.
ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.
AJ Hospital and Research Centre ನಲ್ಲಿ ಮೇಲ್ಶ್ವಾಸಮಾರ್ಗ/ಆಹಾರನಾಳದಲ್ಲಿ ಸಿಲುಕಿಕೊಂಡಿದ್ದ ವಿದೇಶಿ ವಸ್ತು (Foreign Body) ನುಂಗಿದ ಹಿನ್ನೆಲೆಯೊಂದಿಗೆ ರವಾನೆಯಾಗಿದ್ದ 8 ತಿಂಗಳ ಶಿಶುವಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.
ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು.
“ಮಾ. 10ರೊಳಗೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಕಠಿಣ ಹೋರಾಟ ಫಿಕ್ಸ್” ಎಂದು ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮಳೆಮಾಪನ ಕೇಂದ್ರಗಳ ದುರವಸ್ಥೆಯಿಂದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪರಿಹಾರ ವಿತರಣೆಯಲ್ಲಿ ಗಂಭೀರ ಗೊಂದಲ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಗ್ರಾ.ಪಂ.ಗಳ ಮಳೆಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಲು ಸರ್ಕಾರ ಗಮನ ಹರಿಸಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ತೋಟಗಾರಿಕಾ ಸಚಿವರಿಗೆ ಪತ್ರಬರೆದಿದ್ದಾರೆ.
ಮಂಗಳೂರು: ಕೆಎಂಎಫ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಡಾ|| ಶರಣ್ಯ ಅವರನ್ನು ಮಣಿಪಾಲ್ ಆಸ್ಪತ್ರೆ ಕೆಲಸದಿಂದ ಕಿತ್ತು ಹಾಕಿದೆ. ಈ ನಡುವೆ ಶರಣ್ಯ ಮೇಲೆ ಎಫ್ಐಆರ್ ದಾಖಲಾಗಿದ್ದು 25 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೂಡ ಹಾಕಲಾಗಿದೆ. ಕೆಎಂಎಫ್ ಉತ್ಪನ್ನಗಳ ಬಗ್ಗೆ ಶರಣ್ಯ ವ್ಯಾಪಕ ಅಪಪ್ರಚಾರ ಮಾಡುತ್ತಿದ್ದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಫೆ.28ರಂದು ‘ಪ್ರೇರಣಾ-2026’ ಉದ್ಯಮಶೀಲತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ರೋಗಿಗಳು ವಾರಾಂತ್ಯಗಳಲ್ಲಿಯೂ ಸಹ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯುವಂತಾಗಲು ಮಂಗಳೂರಿನ ಡಾ ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಹೊರರೋಗಿ ವಿಭಾಗ (OPD) ಸೇವೆಯನ್ನು ಮಾರ್ಚ್ 1, 2026 ರಿಂದ ಪ್ರತಿ ಭಾನುವಾರವೂ ಒದಗಿಸುವುದಾಗಿ ಘೋಷಿಸಿದೆ.