Showing 20 of 4463 posts • Page 6 of 224
ಮುಖ್ಯಮಂತ್ರಿಯವರು ಮತ್ತು ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತ ದೃಷ್ಟಿ
ಜೈಲ್ ಮೊಬೈಲ್ ಜಾಮರ್ ವಿಚಾರವಾಗಿ ಜಗದೀಶ್ ಶೇಣವ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟಕ್ಕೆ ವಕೀಲರಿಂದ ಮುತ್ತಿಗೆ ಖಂಡಿತ ಎಂದರು.
ವಂದೇ ಮಾತರಂ ಎರಡು ಚರಣ ಹಾಡೋ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಸಿಂಥಟಿಕ್ ಅಡಿಕೆ ಟ್ರಕ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಖ್ಯಾತ ಹಾಗೂ ಪ್ರಥಮ ಇಂಟರ್ ವೆನ್ಶನಲ್ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಹಾಗೂ ಈ ಕ್ಷೇತ್ರದ ಮುಂಚೂಣಿಯ ಪ್ರವರ್ತಕರಾಗಿರುವ ಡಾ. ಎಚ್. ಪ್ರಭಾಕರ್ ಅವರು, ಪ್ರತಿಷ್ಠಿತ ‘ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕೊಂಕಣಿ ನಾಟಕ ಸಭಾ (ರಿ) ಆಯೋಜಿಸಿದ್ದ ಕೊಂಕಣಿ ಗಾಯನ ಸ್ಪರ್ಧೆಯಲ್ಲಿ ಕುಲ್ಶೇಕರದ ರಿಶಾಲ್ ಮೆಲ್ಬಾ ಕ್ರಾಸ್ತಾ ಅವರು ಮತ್ತೊಮ್ಮೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ವಿಶ್ವದಾದ್ಯಂತ ಹರಡಿರುವ ಕೊಂಕಣಿ ಮಾತನಾಡುವ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ‘ಕೊಂಕನಿಜ್’ (KONKANIZ) ಎಂಬ ಸಮುದಾಯ ಆಧಾರಿತ ವೇದಿಕೆಯನ್ನು ಮಂಗಳೂರಿನಲ್ಲಿ ಆರಂಭಿಸಲಾಯಿತು.
ಮಹಿಳಾಪರ ಕಾಳಜಿಯ ಖ್ಯಾತ ಕನ್ನಡ ಸಾಹಿತಿ ಶ್ರೀಮತಿ ಮನೋರಮಾ ಎಂ ಭಟ್ ಅವರ ಹೆಸರಿನಲ್ಲಿ ಅವರ ಮಕ್ಕಳಾದ ಶ್ರೀ ಜಯರಾಮ್ ಮುಳಿಯ ಮತ್ತು ಶ್ರೀ ಮಹೇಶ್ ಭಟ್ ಮುಳಿಯ ಅವರು ಸ್ಥಾಪಿಸಿದ ಈ ದತ್ತಿನಿಧಿಯನ್ನು ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ, ಬಿ ಎ ಪದವಿ ಕಲಿಕೆಯಲ್ಲಿ ಕನ್ನಡ ಸಾಹಿತ್ಯವನ್ನು ವಿಶೇಷವಾಗಿ ಆರಿಸಿದ ವಿದ್ಯಾರ್ಥಿನಿಯರಿಗೆ ಪುರಸ್ಕಾರ ರೂಪದಲ್ಲಿ ನೀಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಇದರ ಪ್ರದಾನವು ನಡೆಯುತ್ತ ಬಂದಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್.ಜೆ.ಇ.ಸಿ) 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿಇ, ಬಿಸಿಎ ಹಾಗೂ ಬಿಬಿಎ ತರಗತಿಗಳ ಉದ್ಘಾಟನೆ ಮತ್ತು ಎಂಜಿನಿಯರ್ಸ್ ಡೇ ಆಚರಣೆಯನ್ನು ಸೆಪ್ಟೆಂಬರ್ 15ರಂದು ಕಲಾಂ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಕೆಡಿಪಿ ಸಭೆಯಲ್ಲಿ ಹೈ ಡ್ರಾಮಾ ನಡೆದಿದ್ದು, ಉಸ್ತುವಾರಿ ಸಚಿವ ಯು ಟಿ ಖಾದರ್ ವಿರುದ್ಧ ಬಿಜೆಪಿ ಶಾಸಕರು ಮುಗಿ ಬಿದ್ದರು.
ಪುತ್ತೂರು ಶಾಸಕ ಅಶೋಕ್ ರೈ ಯಿಂದ ಕೆಆರ್ ಡಿ ಎಲ್ ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.
ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ೭೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಪ್ರತಿಷ್ಠೆ ಸೋಮವಾರ ನೆರವೇರಿತು.
ಕದ್ರಿ ಮಾರ್ಕೆಟ್ನಲ್ಲಿ ನೂತನವಾಗಿ ಆರಂಭಗೊಂಡಿರುವ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದ ಪ್ರಧಾನ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಭಾನುವಾರ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.
ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ತಾಲೂಕು ಸದ್ಯ ರಾಜ್ಯದ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವುದು ಸಮಾಧಾನಕರ ಸಂಗತಿಯಾದರೂ, ವಾಡಿಕೆಯ ಮಳೆಯ ಪ್ರಮಾಣದಲ್ಲಿ ಉಂಟಾಗಿರುವ ಕುಸಿತ ಕರಾವಳಿ ಜನರಲ್ಲಿ ಆತಂಕ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಟೋರಿಕ್ಷಾ ಸಂಘಟನೆಗಳು ಕನಿಷ್ಠ ಪ್ರಯಾಣ ದರವನ್ನು ₹50ಕ್ಕೆ ಹಾಗೂ ಪ್ರತಿ ಕಿಲೋಮೀಟರ್ಗೆ ₹30ಕ್ಕೆ ಹೆಚ್ಚಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿವೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾದ್ಯಂತ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿವೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಮೀರಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿರುವ NSUI, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಪಶ್ಚಿಮಘಟ್ಟ ಸಂರಕ್ಷಣೆ ನೆಪದಲ್ಲಿ ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿರುವುದು ಕರಾವಳಿ ಮತ್ತು ಮಲೆನಾಡು ಭಾಗದ ಜನರ ಅಭಿವೃದ್ಧಿಗೆ ಮಾರಕವಾಗಲಿದೆ.
ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ.