Showing 20 of 4469 posts • Page 65 of 224
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ವಿಮಾನ ನಿಲ್ದಾಣ ಭದ್ರತಾ ಗುಂಪಿನ (ಎಎಸ್ಜಿ) ಸಿಬ್ಬಂದಿ ಶುಕ್ರವಾರ ತಡರಾತ್ರಿ ಪ್ರಯಾಣಿಕರೊಬ್ಬರಿಗೆ ಹಲವಾರು ಬೆಲೆಬಾಳುವ ವಸ್ತುಗಳನ್ನು ಒಳಗೊಂಡ ಒಂದು ಚೀಲವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಹಿಂದಿರುಗಿಸುವ ಮೂಲಕ ತ್ವರಿತ ಪ್ರತಿಕ್ರಿಯೆ ಮತ್ತು ಭದ್ರತಾ ಶಿಷ್ಟಾಚಾರಗಳ ಅನುಸರಣೆಯನ್ನು ಪ್ರದರ್ಶಿಸಿದರು.
ನಿಯಂತ್ರಣ ತಪ್ಪಿ ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಕಾರೊಂದು ಬೆಂಕಿ ಹೊತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ಮಂಗಳೂರಿನ ಪುರಭವನದ ಮುಂದಿನ ಭಾಗದಲ್ಲಿರುವ ಪೊಲೀಸ್ ವಸತಿ ಗೃಹಕ್ಕೆ ಕಳ್ಳರು ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದು ಕೊಂಡು ಹೋಗಿರುವ ಘಟನೆ ನಡೆದಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಧ್ವನಿ ಎತ್ತಿದರು.
ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ದೈವದ ಮೂರ್ತಿ ಹಾಗೂ ಅದಕ್ಕೆ ಸಂಬಂಧಿಸಿದ ಪೂಜಾ ಪರಿಕರಗಳನ್ನು ಕದ್ದ ಕಳ್ಳರನ್ನು ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಾಜ್ಯ ಸರಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ(ಎಬಿ-ಎಆರ್ಕೆ)ಯಲ್ಲಿ ನೋಂದಾಯಿತ ಯಾವುದೇ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯನ್ನು ನಿರಾ ಕರಿಸುವಂತಿಲ್ಲ. ಇಂತಹ ದೂರುಗಳು ಕೆಲವು ಆಸ್ಪತ್ರೆಗಳ ವಿರುದ್ಧ ಬಂದಿದೆ. ಇದನ್ನು ಆರೋಗ್ಯ ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.
ಅತಿ ವೇಗದಿಂದ ಬಂದ ಕಾರೊಂದು ಹಿಂದಿನಿಂದ ರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಡಿಕ್ಕಿ ರಭಸಕ್ಕೆ ಲಾರಿ ಅಡಿಗೆ ಸಿಲುಕಿ ಸಾವನಪ್ಪಿದ ಘಟನೆ ಸುಳ್ಯದ ಸಂಪಾಜೆ ನಡೆದಿದೆ.
ಮುಂಬರುವ ಬೇಸಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ
ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿನ ಪ್ರಕರಣದ ಕೂಲಂಕುಷವಾಗಿ ತನಿಖೆಗೆ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು.
2025-2026 ರ ಅವಧಿಗೆ ಈ ಕೆಳಗಿನ ಮಹನೀಯರು ಪದಾಧಿಕಾರಿಗಳಾಗಿ ಆಯ್ಕೆಗೊಂಡರು. ಮಹಾಪೋಷಕರರು ಸಿಎ ಎಸ್.ಎಸ್ .ನಾಯಕ್ , ಹಿರಿಯ ಲೆಕ್ಕ ಪರಿಶೋಧಕರು , ಎಂ.ಎಸ್.ಎಂ.ಇ & ಸ್ಟಾರ್ಟ್ ಅಪ್ ಮಾರ್ಗದರ್ಶಕರು ಹಾಗೂ ಬಿಸಿನೆಸ್ ಕೋಚ್ , ಅಧ್ಯಕ್ಷರಾಗಿ ಯು . ರಾಮರಾವ್ ,
ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲರ ಭಾಷಣ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ವರದಿ ನೀಡಲು ಮುಂದಾಗಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಕೃಪಾವರಗಳು ಸದಾ ಇದೆ. ಅವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು.
60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ.
ದೂರದೂರಿನಿಂದ ಕೆಲಸ ಅರಸಿ ಸ್ನೇಹಿತನೊಂದಿಗೆ ನಗರಕ್ಕೆ ಬಂದಿದ್ದ ಕಾರ್ಮಿಕನೋರ್ವ ಇತ್ತ ಕೆಲಸನೂ ಇಲ್ಲದೆ ಅತ್ತ ಕರೆ ತಂದ ಸ್ನೇಹಿತನೂ ಇಲ್ಲದೆ ಕಂಗಾಲಾಗಿ ಮರವೇರಿ ಕೂತ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ.