Showing 20 of 4477 posts • Page 69 of 224
ರಾಜ್ಯದಲ್ಲಿ 18 ರಿಂದ 20 ಲಕ್ಷದಷ್ಟು ಇರುವ ಕುಲಾಲ/ಕುಂಬಾರರ ದೇಶದಲ್ಲಿ 9 ಕೋಟಿ ಹೆಚ್ಚು ಜನಸಂಖ್ಯೆ ಇರುವ ಕುಲಾಲ/ಕುಂಬಾರ ಜನಾಂಗಕ್ಕೆ ರಾಜ್ಯದಲ್ಲಿ ಇಲ್ಲಿಯವರೆಗೆ ಲಕ್ಷ್ಮೀಸಾಗರ ಒಬ್ಬರಿಗೆ ಬಿಟ್ಟರೆ ಬೇರೆ ಯಾರಿಗೂ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ.
ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ (Fiza by Nexus Mall) ಮತ್ತು ಮಂಗಳೂರಿನ ಪ್ರಸಿದ್ಧ ತಿಂಡಿ (Try Tinidi) Instagram ಪೇಜ್ ಸಹ ಭಾಗಿತ್ವದಲ್ಲಿ ಇದೇ ಬರುವ ಜನವರಿ 16, 17 ಮತ್ತು 18, 2026 ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಘೋಷಿಸಲಾದ ಸರ್ಕಾರಿ ರಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಜನವರಿ 15 ರಂದು ರಜೆಯನ್ನು ನೀಡಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಗರದ ಬೋಂದೆಲ್ ಬಳಿ ಖಾಸಗಿ ಬಸ್ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಮಗೆ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತವೆ. ಅವುಗಳನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು. ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಸಂಪೂರ್ಣಗೊಳಿಸಿದ ಬಳಿಕ ಉದ್ಯಮದ ಕಡೆಗೆ ಮುಖ ಮಾಡಬೇಕಾದ ಅಗತ್ಯವಿದೆ. ಮಹಿಳೆಯರಲ್ಲಿ ಅಂತರ್ಗತವಾದ ಕೌಶಲ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು.
ರಾಜ್ಯ ಸರ್ಕಾರದಿಂದ ಮಂಗಳೂರಿನಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶವು ಹೂಡಿಕೆದಾರರನ್ನು ಕರಾವಳಿಯತ್ತ ಆಕರ್ಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಾಗ ರಾಜ್ಯ ಸರ್ಕಾರ ಇಬ್ಬರು ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಕಾರಣ ಜಿಲ್ಲೆಯಲ್ಲಿ ಶಾಂತಿ- ಸೌಹಾರ್ದತೆ ಮರುಸ್ಥಾಪನೆಗೆ ಕಾರಣವಾಗಿದೆ. ಇಂತಹ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ವರ್ಗಾವಣೆ ಮಾಡಲ್ಲ.
ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಎಂದು ಹೇಳಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರ ಮೇಲೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿ
ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕಂಕನಾಡಿ ಜೆಪ್ಪು ಕುಡ್ಪಾಡಿ ನಿವಾಸಿ ಚಂದ್ರಹಾಸ (50) ಎಂಬವರು ಲಾರಿ ಮೆಕ್ಯಾನಿಕ್/ ಕಂಡಕ್ಟರ್ ವೃತ್ತಿ ಮಾಡಿಕೊಂಡಿದ್ದು, ಕೆಲಸಕ್ಕೆ ಹೋದರೆ 3 ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು.
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನಿಸಿ, ದನಗಳನ್ನು ಕಡಿಯಲು ಕೊಡ್ತೀಯಲ್ವಾ ಎಂದು ಮೂವರು ಆರೋಪಿಗಳು ಹಫ್ತಾ ಕೇಳಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ
ಯುವಕರಿಗೆ ಡ್ರಗ್ಸ್ ಪೂರೈಕೆ ಮಾಡುತಿದ್ದ 6 ಜನ ಡ್ರಗ್ ಪೆಡ್ಲೆರ್ಸಗೆ ವ್ಯವಸ್ಥಿತವಾಗಿ ಬೆಂಗಳೂರಿನಿಂದ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯನ್ನ 4 ಕೆಜಿ ಎಮ್ ಡಿಎಂ ನೊಂದಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಪಾಂಡೇಶ್ವರ ಪೊಲೀಸ್ ಠಾಣೆ ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್ಐ) ಹರಿಶ್ಚಂದ್ರ ಬೇರಿಕೆ (57) ಜನವರಿ 11 ರ ಭಾನುವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು.
ಕೇರಳದಲ್ಲಿ ಕನ್ನಡ ಮಾಧ್ಯಮದಲ್ಲಿ ಮಲೆಯಾಳಂ ಭಾಷೆ ಹೇರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿ, ಅವರು ಕಾನೂನು ಮಾಡಿದ್ದಾರೆ,
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು.
ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ.
ಕೊಡಿಯಾಲ್ಬೈಲ್ನ ದಿ ಓಶಿಯನ್ ಪರ್ಲ್ ಹೊಟೇಲ್ನ ಸಭಾಂಗಣದಲ್ಲಿ “ಸ್ಪೆಕ್ಟಮ್ – 2026” ಒಂದು ದಿನದ ಹೃದ್ರೋಗ ಸಮ್ಮೇಳನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.