Showing 20 of 4477 posts • Page 94 of 224
ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮುನ್ನೂರು ಗ್ರಾಮದ ಕುತ್ತಾರು ಪಂಡಿತ್ ಹೌಸ್ ಬಳಿ ನಡೆದಿದೆ.
ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಠಾಣೆ ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ನಾಯಕರಿಗೆ ಗೊತ್ತಿರುವುದು ಕೇವಲ ಎರಡು ವಿಷಯಗಳು, ಪಾಕಿಸ್ತಾನ ಮತ್ತು ಮುಸ್ಲಿಮರು. ಅದಲ್ಲದೆ ಅವರಿಗೆ ಬೇರೇನೂ ಗೊತ್ತಿಲ್ಲ. ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ಅವರು ಯಾವ ಸಾಧನೆ
ಶನಿವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸುರತ್ಕಲ್ ನ ಮಧ್ಯ ಗ್ರಾಮದ ಮಾಧವ ನಗರದ ಬೇಬಿ ಎಂಬವರ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ನೀಡಲಾಗಿದೆ, ಬೈಠಕ್ ನಡೆಸಲಾಗಿದೆ ಎಂಬ ಆರೋಪಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ,
ಆರೆಸ್ಸೆಸ್ ಬುದ್ಧ ಗಾಂಧಿ, ಬಸವಣ್ಣ ತತ್ವ ಒಪ್ಪುತ್ತದೆಯೇ?ಭಾರತೀಯ ಸಂವಿಧಾನವನ್ನು ಒಪ್ಪುತ್ತದೆಯೇ? ಸರ್ವಧರ್ಮ ಸಮಾನತೆಯನ್ನು ಪ್ರತಿಪದಿಸುತ್ತದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಳಿದ್ದರಲ್ಲಿ ತಪ್ಪೇನಿದೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಅ. 21 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಮರಕಡದ ಜ್ಯೋತಿನಗರದ ಧರ್ಮರಾಜ (60) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ತುಳು ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ತುಳು ಭಾಷೆಯ ಹಾಗೂ ತುಳುನಾಡಿನ ಸಾಂಸ್ಕೃತಿಕ ಬದುಕಿನ ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುವುದು, ರಾಮಾಯಣ ಕಾಲದಿಂದ ಇಂದಿನ ಆಧುನಿಕ
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕಿನ್ನಿಗೋಳಿ ಪರಿಸರದಲ್ಲಿನ ಸಾರ್ವಜನಿಕರಿಗೆ ಮಾರುಕಟ್ಟೆಯಲ್ಲಿ ಹಣವನ್ನು ಹೊಡಿಕೆ ಮಾಡಿ ಲಾಭಾಂಶ ನೀಡುವುದಾಗಿ ಸುಮಾರು 1.5 ಕೋಟಿ ಹಣ ಹಾಗೂ ಚಿನ್ನವನ್ನು ಪರಿಚಯಸ್ದರಿಂದ ಪಡೆದು ಹಲವರಿಗೆ ವಂಚಿಸಿದ್ದಾರೆ.
ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿ
ಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆ
ಗಲ್ಫ್ ರಾಷ್ಟ್ರದಲ್ಲಿ ಉದ್ಯಮಿಯಾಗಿರುವ ಕೇರಳ ಮೂಲದ ವ್ಯಕ್ತಿಯನ್ನು ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿದ್ದು, ಈ ಬಗ್ಗೆ ದೂರು ಕೊಟ್ಟು ಎಫ್ಐಆರ್ ದಾಖಲಾಗಿ ವಾರ ಕಳೆದರೂ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ.
ವಿಶ್ವ ಟ್ರಾಮಾ ದಿನ 2025ರ ಅಂಗವಾಗಿ ಕೆಎಂಸಿ ಆಸ್ಪತ್ರೆಯು, ಮಂಗಳೂರು ನಗರ ಪೊಲೀಸ್ಇಲಾಖೆ ಜೊತೆಗೂಡಿ ನಗರದ ಟ್ರಾಫಿಕ್ನಿರ್ವಹಣೆ ಬೆಂಬಲಿಸುವ ಮತ್ತು ಟ್ರಾಮಾ (ಆಘಾತ) ತಡೆಗಟ್ಟುವಿಕೆಯ ಕುರಿತು ಸಾರ್ವಜನಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ
ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮುಂಗಾರು ಮಳೆ ಮುಗಿದಿದ್ದು, ಇದೀಗ ಹಿಂಗಾರು ಮಳೆ ಕೇರಳಕ್ಕೆ ಎಂಟ್ರಿ ಕೊಟ್ಟಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಅಕ್ಟೋಬರ್ 20 ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರ ವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನುದಾರರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 15 ಸಾವಿರ ರೂ. ಮೌಲ್ಯದ ಕೆಂಪುಕಲ್ಲುಗಳ ಸಹಿತ ಲಾರಿಯನ್ನು ಪಡೀಲ್ ಬಳಿ ಕಂಕನಾಡಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.