ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1740 ರೂ ಆಗಿದೆ. ಆದರೆ, ಕಂಪನಿಗಳು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಧಾಬಾಗಳ ಆಹಾರ ದರಗಳ ಮೇಲೆ ಪರಿಣಾಮ ಬೀರಬಹುದು. ತೈಲ ಮಾರುಕಟ್ಟೆ ಕಂಪನಿಗಳು ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಸೆಪ್ಟೆಂಬರ್ ಮತ್ತು ಆಗಸ್ಟ್‌ನಲ್ಲಿಯೂ ಬೆಲೆ ಏರಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ 39 ರೂ., ಆಗಸ್ಟ್ ನಲ್ಲಿ 8-9 ರೂ. ಏರಿಕೆಯಾಗಿತ್ತು.
ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 48.50 ರೂಪಾಯಿ ಬೆಲೆ ಏರಿಕೆ ಕಂಡುಬಂದಿದ್ದು 1,818 ರೂಪಾಯಿಗೆ ತಲುಪಿದೆ. ಬೆಲೆ ಪರಿಷ್ಕರಣೆಗೂ ಮೊದಲು ಬೆಲೆಯು 19 KG ಪ್ರತಿ ಸಿಲಿಂಡರ್‌ಗೆ 1,769.50 ರೂಪಾಯಿಗಳಷ್ಟಿತ್ತು.

