Ad

ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ

ಇಂದು ಸೆಪ್ಟಂಬರ್‌ 1, ಹಾಗಾಗಿ ಕೆಲವು ಬದಲಾವಣೆಗಳನ್ನು ಇಂದಿನಿಂದ ನಾವು ಕಾಣಬಹುದು.ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ.

ಇಂದು ಸೆಪ್ಟಂಬರ್‌ 1, ಹಾಗಾಗಿ ಕೆಲವು ಬದಲಾವಣೆಗಳನ್ನು ಇಂದಿನಿಂದ ನಾವು ಕಾಣಬಹುದು.ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಹೊಸ ದರಗಳ ಪ್ರಕಾರ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 39 ರೂ. ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1691.50 ರೂ. IOCL ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.

Ad
Ad
Nk Channel Final 21 09 2023