ಬೆಂಗಳೂರು: ಅಕಾಲಿಕ ಮಳೆ, ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
ಇದೀಗ ಬೆಲೆ ಏರಿಕೆಯ ಕ್ಯೂನಲ್ಲಿ ಸೇಬುಹಣ್ಣು ಬಂದು ನಿಂತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ವರ್ಷ 6.99 ಲಕ್ಷ ಮೆಟ್ರಿಕ್ ಟನ್ ಸೇಬು ಹಣ್ಣಿನ ಇಳುವರಿ ಬಂದಿತ್ತು. ಈ ವರ್ಷ ಇದು ಕೇವಲ 2.63 ಲಕ್ಷ ಮೆಟ್ರಿಕ್ ಟನ್‌ಗೆ ಕುಸಿದಿದೆ.
ಇನ್ನೂ ಕಳೆದ ವರ್ಷ 2025ರಲ್ಲಿ 2.37 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೇಬು ಬೆಳೆಯಲಾಗಿತ್ತು. ಆದರೆ ಈ ವರ್ಷ ಕೇವಲ 1.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಸೇಬು ಬೆಳೆಯಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಒಟ್ಟು 2.5 ಲಕ್ಷ ಕುಟುಂಬಗಳು ಸೇಬು ಬೆಳೆ ಬೆಳೆಯುತ್ತಾರೆ. ಈ ಬಾರಿ ಮಾರುಕಟ್ಟೆಯಲ್ಲಿ ಸೇಬಿನ ಕೊರತೆ ಉಂಟಾಗಿ ದರ ಏರಿಕೆ ಆಗುವ ಸಾಧ್ಯತೆ ಇದೆ

