ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ.

ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.

View this post on Instagram

A post shared by News Karnataka (@newskarnataka)