ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ.
24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,115 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 911.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 66,250 ರೂ
ಚೆನ್ನೈ: 67,000 ರೂ
ಮುಂಬೈ: 66,250 ರೂ
ದೆಹಲಿ: 66,400 ರೂ
ಕೋಲ್ಕತಾ: 66,250 ರೂ
ಕೇರಳ: 66,240 ರೂ
ಅಹ್ಮದಾಬಾದ್: 66,300 ರೂ
ಜೈಪುರ್: 66,400 ರೂ
ಲಕ್ನೋ: 66,400 ರೂ
ಭುವನೇಶ್ವರ್: 66,250 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

