Ad

ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : ಖರೀದಿಗೆ ಇದೆ ಒಳ್ಳೆ ಟೈಮ್‌

ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ.

Ad
300x250 2

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,115 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 25ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 911.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 66,250 ರೂ
ಚೆನ್ನೈ: 67,000 ರೂ
ಮುಂಬೈ: 66,250 ರೂ
ದೆಹಲಿ: 66,400 ರೂ
ಕೋಲ್ಕತಾ: 66,250 ರೂ
ಕೇರಳ: 66,240 ರೂ
ಅಹ್ಮದಾಬಾದ್: 66,300 ರೂ
ಜೈಪುರ್: 66,400 ರೂ
ಲಕ್ನೋ: 66,400 ರೂ
ಭುವನೇಶ್ವರ್: 66,250 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ad
Ad
Nk Channel Final 21 09 2023
Ad