ಬೆಂಗಳೂರು: ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ವಿದೇಶಗಳಲ್ಲಿ ಹಲವೆಡೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಮಂಗಳವಾರ ಯಥಾಸ್ಥಿತಿ ಹೊಂದಿದೆ.

ಕಳೆದ ಕೆಲ ದಿನಗಳ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಇಳಿಕೆ ಕಂಡುಬಂದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,790 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,440 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 66,950 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 73,040 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 879 ರೂ ಇದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,950 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 73,040 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 844 ರೂ ಇದೆ.