ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಹೊಸ ಎತ್ತರಕ್ಕೆ ಹೋಗಿದೆ. ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ 8,133 ರೂ ತಲುಪಿದೆ. ಪೇಟಿಎಂ ಪ್ಲಾಟ್​ಫಾರ್ಮ್​ನಲ್ಲಿ ಡಿಜಿಟಲ್ ಗೋಲ್ಡ್ ಬೆಲೆ 8,200 ರೂ ದಾಟಿದೆ. ಫೋನ್​ಪೇ ಡಿಜಿಟಲ್ ಗೋಲ್ಡ್​ನಲ್ಲಿ 8,196 ರೂ ಇದೆ.

ಇನ್ನು, 18 ಕ್ಯಾರಟ್ ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 6,100 ರೂ ಗಡಿ ದಾಟಿದೆ. 22 ಕ್ಯಾರಟ್ ಚಿನ್ನದ ಬೆಲೆ 7,455 ರೂಗೆ ಏರಿದೆ. ಬೆಳ್ಳಿ ಬೆಲೆ ಮೊದಲ ಬೆಂಗಳೂರಿನಲ್ಲಿ ಮೊದಲ ಬಾರಿಗೆ 100 ರೂ ಗಡಿ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 109 ರೂ ಗಡಿ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,550 ರುಪಾಯಿ ಇದೆ.

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,550 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,330 ರೂ, 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,000 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ, ಇದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,550 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,330 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ ಇದೆ.