Bengaluru 29°C
Ad

ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಮೊದಲ ಬಾರಿಗೆ ಪ್ರಮುಖ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಎರಡೂವರೆ ರೂ ಅಗ್ಗವಾಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಮೊದಲ ಬಾರಿಗೆ ಪ್ರಮುಖ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಎರಡೂವರೆ ರೂ ಅಗ್ಗವಾಗಿದೆ. ಸತತ ಹೆಚ್ಚಳದ ಬಳಿಕ ಆಭರಣ ಪ್ರಿಯರು ಒಂದಿಷ್ಟು ನಿಟ್ಟುಸಿರು ಬಿಡಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 31ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 66,700 ರೂ
ಚೆನ್ನೈ: 67,300 ರೂ
ಮುಂಬೈ: 66,700 ರೂ
ದೆಹಲಿ: 66,850 ರೂ
ಕೋಲ್ಕತಾ: 66,700 ರೂ
ಕೇರಳ: 66,700 ರೂ
ಅಹ್ಮದಾಬಾದ್: 66,750 ರೂ
ಜೈಪುರ್: 66,850 ರೂ
ಲಕ್ನೋ: 66,850 ರೂ
ಭುವನೇಶ್ವರ್: 66,700 ರೂ

Ad
Ad
Nk Channel Final 21 09 2023
Ad