ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಿದೆ. ಇಂದು ಮಂಗಳವಾರ ಚಿನ್ನದ ಬೆಲೆಯಲ್ಲಿ ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ.

ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ. 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ. 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,545 ರೂ ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ. 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ. ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ ಇದೆ. ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರು: 14,110 ರೂ. ಚೆನ್ನೈ: 14,220 ರೂ. ಮುಂಬೈ: 14,110 ರೂ. ದೆಹಲಿ: 14,125 ರೂ. ಕೋಲ್ಕತಾ: 14,110 ರೂ ಕೇರಳ: 14,110 ರೂ. ಅಹ್ಮದಾಬಾದ್: 14,115 ರೂ ಜೈಪುರ್: 14,125 ರೂ. ಲಕ್ನೋ: 14,125 ರೂ ಭುವನೇಶ್ವರ್: 14,110 ರೂ ಇದೆ.