ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ನಿನ್ನೆ 50 ರೂನಷ್ಟು ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು 10 ರೂನಷ್ಟು ದುಬಾರಿಯಾಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಮಲೇಷ್ಯಾ ಮೊದಲಾದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ.

ಅದು ಬಿಟ್ಟರೆ ಅಂತಾರಾಷ್ಟ್ರೀಯ ಚಿನಿವಾರ ಪೇಟೆಯಲ್ಲಿ ಅಂತಹ ವ್ಯತ್ಯಯವಾಗಿಲ್ಲ. ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,100 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,560 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,100 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,560 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ ಇದೆ.