ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಆಭರಣ ಮತ್ತು ಅಪರಂಜಿ ಎರಡೂ ಚಿನ್ನದ ಬೆಲೆ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಇಂದು ಬುಧವಾರ ಹೆಚ್ಚಳವಾಗಿದೆ. ನಾಳೆ ಗುರುವಾರ ಇದು ಭಾರತದ ಚಿನಿವಾರ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು.
ಇನ್ನು, ಬೆಳ್ಳಿ ಬೆಲೆಯಲ್ಲಿ ಗ್ರಾಮ್ಗೆ ಒಂದೂವರೆ ರೂನಷ್ಟು ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,760 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,760 ರುಪಾಯಿ ಆಗಿದೆ.
ಬೆಳ್ಳಿ ಬೆಲೆ 100 ಗ್ರಾಮ್ಗೆ 8,400 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆಯು 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,760 ರೂ, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,830 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ ಇದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆಯು 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,760 ರೂ, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,830 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ ಇದೆ.