ನವದೆಹಲಿ: ಗುರುವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಬೆಲೆಯು 141 ಡಾಲರ್‌ನಿಂದ 144 ಡಾಲರ್‌ಗೆ ಏರಿಕೆಯಾಗಿದೆ.
ಭಾರತದಲ್ಲೂ ಚಿನ್ನದ ಮೌಲ್ಯ ಗಮನಾರ್ಹವಾಗಿ ಹೆಚ್ಚಾಗಿದ್ದು, ಪ್ರತಿ ಗ್ರಾಮ್ ಚಿನ್ನದ ಬೆಲೆಯಲ್ಲಿ 395 ರೂಪಾಯಿ ಏರಿಕೆಯಾಗಿದೆ. ಪ್ರಸ್ತುತ ಮಾರುಕಟ್ಟೆ ದರದಂತೆ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರೂಪಾಯಿಗೆ ತಲುಪಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ದರ 1,59,270 ರೂಪಾಯಿಯಾಗಿದೆ. ಬೆಂಗಳೂರಿನಲ್ಲಿಯೂ ಸಹ 10 ಗ್ರಾಮ್ ಚಿನ್ನದ ಬೆಲೆ 1,46,000 ರೂಪಾಯಿಯಲ್ಲಿ ಸ್ಥಿರವಾಗಿದೆ.
ಬಂಗಾರದ ಹಾದಿಯಲ್ಲೇ ಬೆಳ್ಳಿಯ ಬೆಲೆಯಲ್ಲೂ ಭಾರಿ ಚೇತರಿಕೆ ಕಂಡುಬಂದಿದೆ. ಪ್ರತಿ ಗ್ರಾಮ್ ಬೆಳ್ಳಿಗೆ 10 ರೂಪಾಯಿ ಜಿಗಿತ ಕಂಡಿದ್ದು, ದೇಶೀಯ ಮಾರುಕಟ್ಟೆಯಲ್ಲಿ 100 ಗ್ರಾಮ್ ಬೆಳ್ಳಿಯ ಬೆಲೆ 25,500 ರೂಪಾಯಿಗೆ ತಲುಪಿದೆ. ಇನ್ನು ತಮಿಳುನಾಡು ಹಾಗೂ ಕೇರಳದಂತಹ ನೆರೆರಾಜ್ಯಗಳಲ್ಲಿ 100 ಗ್ರಾಮ್ ಬೆಳ್ಳಿಯ ದರ 26,000 ರೂಪಾಯಿಯಷ್ಟಿದೆ.

