ನವದೆಹಲಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ನವದೆಹಲಿಯ ತಮ್ಮ ನಿವಾಸದಲ್ಲಿ ರಾಜಸ್ಥಾನ ಸಿಎಂ ಭೇಟಿ ವೇಳೆ ಮಾತನಾಡಿ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ರಾಜಸ್ಥಾನ ಸೇರಿದಂತೆ ಇಡೀ ದೇಶಕ್ಕೆ ಇಂಧನ ಭದ್ರತೆ ಖಾತರಿಪಡಿಸಲು ಬದ್ಧವಾಗಿದೆ ಎಂದು ತಿಳಿಸಿದರು.
ರಾಜಸ್ಥಾನ ಸಹ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಅಭಿವೃದ್ಧಿ ಸಾಧಿಸುತ್ತಿದ್ದು, PM ಕುಸುಮ ಮತ್ತು PM ಸೂರ್ಯಘರ್ ಯೋಜನೆಗಳ ಅಡಿಯಲ್ಲಿ ರಾಜಸ್ಥಾನದಲ್ಲಿ ಸೌರಶಕ್ತಿ ಯೋಜನೆಗಳ ಪ್ರಗತಿ ಬಗ್ಗೆ ರಾಜಸ್ಥಾನ ಸಿಎಂ ಭಜನ್ ಲಾಲ್ ಅವರೊಂದಿಗೆ ಸಚಿವ ಜೋಶಿ ಚರ್ಚಿಸಿದರಲ್ಲದೆ, ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

