Bengaluru 21°C
Ad

ವಿಪ್ರೊ ಮಾಜಿ ಸಿಇಒ ಥಿಯೆರ್ರಿ ಡೆಲಾಪೋರ್ಟೆಗೆ ವಾರ್ಷಿಕ ಸಂಬಳ 166 ಕೋಟಿ ರೂ!

ವಿಪ್ರೋದ ಮಾಜಿ ಸಿಇಒ ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಗಳಿಸಿ ಸತತ ಎರಡನೇ ವರ್ಷ ಐಟಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಡದುಕೊಂಡಿದ್ದಾರೆ.

ಥಿಯೆರಿ ಡೆಲಾಪೋರ್ಟೆ ಅವರು ಏಪ್ರಿಲ್‌ 6ರಂದು ಕಂಪನಿಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಕಂಪನಿಯು 32 ವರ್ಷಗಳ ಕಾಲ ಅನುಭವ ಹೊಂದಿರುವ ಶ್ರೀನಿವಾಸ್ ಪಾಲ್ಲಿಯಾ ಅವರನ್ನು ನೇಮಕ ಮಾಡಿದೆ.

ಯುಎಸ್ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಕಮಿಷನ್‌ಗೆ ವಿಪ್ರೊ ಸಲ್ಲಿಸಿರುವ 20 ಎಫ್ ಫೈಲಿಂಗ್‌ಗಳ ಪ್ರಕಾರ ಡೆಲಾಪೋರ್ಟೆ 3.9 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಸಂಬಳ ಮತ್ತು ಭತ್ಯೆ, 5 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ಕಮಿಷನ್/ ವೇರಿಯಬಲ್ ಪೇ, ಸುಮಾರು 7 ಮಿಲಿಯನ್ ಡಾಲರ್ ಇತರ ಮತ್ತು 4 ಮಿಲಿಯನ್‌ ಡಾಲರ್ ಗಿಂತಲೂ ಹೆಚ್ಚು ದೀರ್ಘಾವಧಿಯ ಪರಿಹಾರವನ್ನು ಗಳಿಸಿದ್ದಾರೆ.

ಶ್ರೀನಿವಾಸ್ ಪಲ್ಲಿಯಾ ಅವರು ಸುಮಾರು 50 ಕೋಟಿ ರೂಪಾಯಿಗಳ ವಾರ್ಷಿಕ ಸಂಭಾವನೆ ಪ್ಯಾಕೇಜ್‌ ಸ್ವೀಕರಿಸಿದ್ದಾರೆ. ಇದರಿಂದ ಅವರು ಆರ್ಥಿಕ ವರ್ಷ 2025ರಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಎರಡನೇ ಸಿಇಒ ಆಗಿದ್ದಾರೆ.

ಕಂಪನಿಯ ಆದಾಯವು ಇಳಿಮುಖವಾಗುತ್ತಿರುವ ಹೊತ್ತಲ್ಲಿ ಹೊಸ ಸಿಇಒ ನೇಮಕ ವೇತನದ ನಡುವಿನ ಅಸಮಾನತೆಯನ್ನು ಹೆಚ್ಚಿಸಿದೆ. ಸಿಇಒ ವೇತನವು ಸತತ ಎರಡನೇ ವರ್ಷಕ್ಕೆ ಹೆಚ್ಚಾಗಿದೆ.

Ad
Ad
Nk Channel Final 21 09 2023
Ad