Bengaluru 22°C
Ad

ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ದರಪಟ್ಟಿ ಹೀಗಿದೆ!

ಭಾರತದಲ್ಲಿ ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 39 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಹೆಚ್ಚಾಗಿದೆ. ಗ್ರಾಮ್​ಗೆ 96 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 102 ರೂಗೆ ಏರಿದೆ.

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 39 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಹೆಚ್ಚಾಗಿದೆ. ಗ್ರಾಮ್​ಗೆ 96 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 102 ರೂಗೆ ಏರಿದೆ.

ಕಳೆದ 10 ದಿನದಲ್ಲಿ ಇದರ ಬೆಲೆ ಗ್ರಾಮ್​ಗೆ 5 ರೂನಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಹತ್ತು ದಿನದಲ್ಲಿ ಬಹುತೇಕ 300 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,100 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ.

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 960 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ ಇದೆ.

Ad
Ad
Nk Channel Final 21 09 2023