ನಂಜನಗೂಡು: ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚನಹಳ್ಳಿ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದೆ.

ಚುಂಚನಹಳ್ಳಿ ಗ್ರಾಮದ ಶ್ರೀ ಮಣಿಯಮ್ಮ ದೇವಾಲಯದ ರಸ್ತೆ ಮತ್ತು ಗ್ರಾಮದ ವಿವಿಧ ಕಡೆ ಚರಂಡಿಗಳಲ್ಲಿ ಕಸಕಡ್ಡಿ ಕೊಳಚೆ ನೀರು, ತುಂಬಿಕೊಂಡು ದುರ್ನಾತ ಬೀರುತ್ತಿದೆ. ಇದರಿಂದ ಗ್ರಾಮಸ್ಥರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿಯಾದರೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ಚರಂಡಿಗಳನ್ನು ಸ್ವಚ್ಛತೆ ಮಾಡುವಂತೆ ಹಲವು ಬಾರಿ ದೇವನೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೆ ಎಂದಿಲ್ಲ. ದೇವನೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಈ ಕೂಡಲೇ ಗಬ್ಬೆದ್ದು ನಾರುತ್ತಿರುವ ಚರಂಡಿಗಳನ್ನು ಸ್ವಚ್ಛತೆ ಮಾಡಬೇಕು ಇಲ್ಲವಾದಲ್ಲಿ ಗ್ರಾಪಂ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.