ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಸಾರಿಗೆ ಬಸ್ ಉರುಳಿಬಿದ್ದ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದೆ. ಖೋಡೆ ಗೆಸ್ಟ್ ಹೌಸ್ ಬಳಿ ತಿರುವಿನಲ್ಲಿ ಘಟನೆ ನಡೆದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.