ಮೈಸೂರು: ಸರಗೂರು ತಾಲ್ಲೂಕಿನ ಹಂಚಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಹಾಡಿಯ ನಿವಾಸಿಗಳು ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟು ವಿನೂತನವಾಗಿ ಪ್ರತಿಭಟನೆ ಮಾಡಿದರು.
ದಡದಹಳ್ಳಿ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹಣ ಮಂಜೂರು ಮಾಡಲಾಗಿದೆ. ಅನುದಾನ ಬಿಡುಗಡೆಯಾಗಿದರೂ ಇದುವರೆಗೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರಸ್ತೆಯಲ್ಲಿ ಜನ ಜಾನುವಾರುಗಳು ಓಡಾಡಲು ತುಂಬಾ ತೊಂದರೆಯಾಗಿದ್ದು, ರಸ್ತೆ ನಿರ್ಮಾಣ ಮಾಡುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೆ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

