ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುತ್ತಿದ್ದ ಟಾರ್ಚ್ಲೈಟ್ ಪರೇಡ್ ತಾಲೀಮಿನ ವೇಳೆ ಬೈಕ್ ಅಪಘಾತ ಸಂಭವಿಸಿದೆ.
ಸಶಸ್ತ್ರ ಪೊಲೀಸ್ ಪಡೆಯ ಮೋಟಾರ್ಸೈಕಲ್ ಪ್ರದರ್ಶನದ ಅಭ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ, ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಬೈಕ್ ಕಸರತ್ತನ್ನು ಅರ್ಧಕ್ಕೆ ಮೊಟಕುಗೊಳಿಸಿದ ಪೊಲೀಸರು ಮೈದಾನದಿಂದ ಹೊರನಡೆದಿದ್ದಾರೆ. ನಾಳೆ ಸಂಜೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟಾರ್ಚ್ಲೈಟ್ ಪರೇಡ್ ತಾಲೀಮು ನಡೆಯಬೇಕಿದ್ದು, ಅದಕ್ಕೂ ಮುನ್ನ ಈ ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

