ಮೈಸೂರು : ಬ್ಯಾಂಗಲ್ ಸ್ಟೋರ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಂಜನಗೂಡಿನ ಆರ್. ಪಿ ರೋಡ್ ನಲ್ಲಿ ನಡೆದಿದೆ.
ರವಿ ಕುಮಾರ್ ಬ್ಯಾಂಗಲ್ ಸ್ಟೋರ್ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
2 ಲಕ್ಷ ರೂಪಾಯಿ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

