ಮೈಸೂರು : ಚಲಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೈಸೂರಿನ ರೈಲ್ವೆ ನಿಲ್ದಾಣದ ದಾಸಪ್ಪ ವೃತ್ತದ ಸಮೀಪ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ‌ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಮೈಸೂರಿನಿಂದ ವಿರಾಜಪೇಟೆಗೆ ಕೆಎಸ್ ಆರ್ ಟಿಸಿ ಬಸ್ ತೆರಳುತ್ತಿದ್ದರು. KA 09 F4386 ನೋಂದಣಿ ಸಂಖ್ಯೆಯ ಬಸ್.

ದಾಸಪ್ಪ ವೃತ್ತದ ಬಳಿ ಚಲಿಸುತ್ತಿದ್ದ ಇದ್ದಕ್ಕಿದ್ದಂತೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ನಿಂದ ಪ್ರಯಾಣಿಕರು ಕೆಳಗಿಳಿದಿದ್ದಾರೆ. ಚಾಲಕ, ನಿರ್ವಾಹಕ ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ ಸಿಬ್ಬಂದಿಗಳು

ಪೈಪ್ ನಿಂದ ಡೀಸಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.