ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಣಿಸಿಕೊಂಡು ಲಕ್ಷಾಂತರ ಮೌಲ್ಯದ ಪದಾರ್ಥ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ಗುಜರಿ ವ್ಯಾಪಿಸಿ ಪದಾರ್ಥಗಳನ್ನ ನಾಶ ಮಾಡಿದೆ. ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾದರೂ ಪದಾರ್ಥಗಳು ಸುಟ್ಟು ನಾಶವಾಗಿದೆ.

ನಾಸಿರ್ ಎಂಬ ವ್ಯಕ್ತಿಗೆ ಗುಜರಿ ಸೇರಿದೆ. ಗುಜರಿ ಸಮೀಪವೇ ವಾಸದ ಮನೆಗಳಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಇಂತಹ ಗುಜರಿಗಳಿಗೆ ಅನುಮತಿ ನೀಡುವ ಮುನ್ನ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.