ಮೈಸೂರು : ಹಣ ಎಟಿಎಂಗೆ ತುಂಬದೆ ತೆಗೆದುಕೊಂಡು ಹೋದ ಆರೋಪ ಕೇಳಿಬಂದಿದ್ದು, ಹುಣಸೂರು ತಾಲ್ಲಕಿನ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಟಿ ಎಲ್ ಎಂಟರ್ ಪ್ರೈಸಸ್ನಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್. ಎಟಿಎಂಗೆ ಹಣ ತುಂಬವ ಏಜೆನ್ಸಿ ಪಡೆದಿದ್ದ ಟಿ ಎಲ್ ಎಂಟರ್ಪ್ರೈಸಸ್. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ ತುಂಬುತ್ತಿದ್ದರು.
ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಅಡುತ್ತಿದ್ದರು. ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸವಾಗಿದೆ. ಕ್ಯಾಶ್ ಲೋಡಿಂಗ್ ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿದೆ. ಅಕ್ಷಯ್ ಎಟಿಎಂ ಹಣ ಹಾಕದೆ ಬ್ಯಾಗ್ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ.
ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ ಎಂಬಾಕೆಯ ಕುಮ್ಮಕ್ಕು ಆರೋಪ ಕೇಳಿಬಂದಿದ್ದು, ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

