ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ. ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯ ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಲಾಗಿದೆ.

ಗೋಪುರವು ಧೂಳಿನಿಂದ ಕೂಡಿದ್ದು, ಹಕ್ಕಿ ಪಕ್ಷಿಗಳ ಹೆಚ್ಚೆ ಮತ್ತು ಧೂಳನ್ನು ಸ್ವಚ್ಛಗೊಳಿಸಿ, ಸುಣ್ಣ ಬಣ್ಣ ಬಳಿದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದ ತಾಲ್ಲೂಕು ಆಡಳಿತ ತನ್ನ ಬೇಜವಾಬ್ದಾರಿ ತೋರಿದೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗಿದ್ದು, ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಗೋಪುರವನ್ನು ಸ್ವಚ್ಛಗೊಳಿಸದೆ ಹಾಗೆಯೇ ಆಚರಣೆ ಮಾಡಿದ್ದಾರೆ.
ಯಾವುದೇ ಬಣ್ಣವನ್ನು ಬಳಿದಿಲ್ಲ. ಸಿಸಿ ಕ್ಯಾಮೆರಾ ಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

