ನಂಜನಗೂಡು: ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ನಡೆದಿದೆ.

ದೇವನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ಮುರಿದಿದೆ. ಸದ್ಯಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮರವನ್ನು ತೆರವುಗೊಳಿಸಿದ್ದಾರೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ.