ನಂಜನಗೂಡು: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ನಂಜನಗೂಡು ಪಟ್ಟಣ ಪೊಲೀಸರು ಎರಡು ವಾಹನಗಳ ಸಮೇತ ಪಡಿತರವನ್ನ ವಶಪಡಿಸಿಕೊಂಡಿದ್ದಾರೆ.
ನಂಜನಗೂಡಿನಿಂದ ಚಾಮರಾಜನಗರಕ್ಕೆ ತೆರಳುವ ಬೈಪಾಸ್ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಕ್ಕಿಯನ್ನ ಸೀಜ್ ಮಾಡಿದ್ದಾರೆ. ಪಟ್ಟಣ ಠಾಣೆ ಸಿಪಿಐ ರವೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಪೊಲೀಸರ ದಾಳಿ ನಡೆಸಿದ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.ಈ ಸಂಭಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

