ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನಿಸಿರುವ ಘಟನೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದರು.
ರೈಲ್ವೆ ನಿಲ್ದಾಣದಲ್ಲಿ ತಾಯಿ ಜೊತೆ ಮಲಗಿದ್ದ ಮಗುವನ್ನು ವೃದ್ಧೆ ಅಪಹರಣ ಮಾಡಿದರು . ಎಚ್ಚರಗೊಂಡಾಗ ಪಕ್ಕದಲ್ಲಿ ಮಲಗಿದ್ದ ಮಗು ನಾಪತ್ತೆಯಾಗಿದೆ. ಕೂಡಲೇ ರೈಲ್ವೆ ಪೊಲೀಸರಿಗೆ ಮಗುವಿನ ತಾಯಿ ಹಾಗೂ ಕುಟುಂಬಸ್ಥರು ಮಾಹಿತಿ ನೀಡಿದರು. ತಕ್ಷಣ ಆರ್. ಪಿ.ಎಫ್ ಪೊಲೀಸರು ಎಚ್ಚೆತ್ತುಕೊಂಡರು. ಸಿಸಿ ಕ್ಯಾಮೆರಾ ಚೆಕ್ ಮಾಡಿ ಕಾರ್ಯಾಚರಣೆ ನಡೆಸಿದರು.
50 ವರ್ಷದ ವೃದ್ಧೆ ಮಗು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರೈಲ್ವೆ ನಿಲ್ದಾಣದಲ್ಲಿ ವೃದ್ಧೆಯನ್ನು ಬಂಧಿಸಿ ಪೊಲೀಸರು ಮಗುವನ್ನು ವಶಕ್ಕೆ ಪಡೆದರು. ಆರೋಪಿ ಹಾಸನ ಮೂಲದ ನಂದಿನಿ ಎಂದು ಪೊಲೀಸರು ಗುರುತು ಪತ್ತೆ ಹಚ್ಚಿದರು. ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

