ಮೈಸೂರು: ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಸುತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಒಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಮಾರ್ಗ ದರ್ಶಿ ಬ್ಯಾಂಕ್ (ಭಾರತೀಯ ಸ್ಟೇಟ್ ಬ್ಯಾಂಕ್) ಮೈಸೂರು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್, ಪ್ರಾದೇಶಿಕ ಕಛೇರಿ – 1 ಮೈಸೂರು ಇವರ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್) ಮುಖ್ಯ ವ್ಯವಸ್ಥಾಪಕರಾದ ಶ್ರೀ ಕೃಷ್ಣ ಮೂರ್ತಿ ಹಾಗೂ ಮೈಸೂರು ಪ್ರಾದೇಶಿಕ ಕಛೇರಿಯ ವ್ಯವಸ್ಥಾಪಕರಾದ ಶ್ರೀ ಆನಂದಕುಮಾರ್  ಅವರು, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಪ್ರಧಾನ ಮಂತ್ರಿ ಜನಧನ ಯೋಜನೆ (PMJDY), ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (PMJJY),

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಮತ್ತು ಅಟಲ್ ಪಿಂಚಣಿ ಯೋಜನೆಗಳ (APY) ಹಾಗೂ ಹೆಚ್ಚುತ್ತಿರುವ ತಂತ್ರ ಜ್ನಾನ ಆಧಾರಿತ  ಮೋಸಗಳ ಕುರಿತು  ಸವಿವರವಾಗಿ ಮಾಹಿತಿ ನೀಡಿದರು. ಎಲ್ಲರೂ ತಮ್ಮ ಬ್ಯಾಂಕ್ ಖಾತೆಗಳಿಗೆ ನಾಮ ನಿರ್ದೇಶನ ಮತ್ತು ಇ-ಕೆವೈಸಿ ಮಾಡಿಸುವಂತೆ ತಿಳಿಸಿ, ಸ್ಥಳದಲ್ಲೇ ಖಾತೆಯಿಲ್ಲದ ಸಾರ್ವಜನಿಕರಿಗೆ ಖಾತೆ ತೆರೆಯಲು ಸೂಚಿಸಿದರು.

ಬ್ಯಾಂಕಿಂಗ್ ಸೌಲಭ್ಯಗಳ ಬಗ್ಗೆ ಮಾಹಿತಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ  ಶ್ರೀಜಿತ್ ಅವರು ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಕುರಿತು ಮಾಹಿತಿ ನೀಡಿ, ಯುವಕರು ಈ ಯೋಜನೆಯಡಿ ಸಾಲ ಪಡೆದು ಉದ್ಯಮದಾರರಾಗಲು ಕರೆ ನೀಡಿದರು. ಬ್ಯಾಂಕ್‌ಗಳು ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೂ ಸಾಲ ನೀಡುತ್ತವೆ ಎಂದು ವಿವರಿಸಿ, ಬ್ಯಾಂಕ್ ಗಳೊಂದಿಗೆ ಉತ್ತಮ ಸಂಬಂಧ ಹೊಂದುವಂತೆ ಸಲಹೆ ನೀಡಿದರು. ವಿಮಾ ಯೋಜನೆಗಳ ಪ್ರಯೋಜನಗಳನ್ನು ನೈಜ ಘಟನೆಗಳ ಮೂಲಕ ವಿವರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್, ಮೈಸೂರು  ವಲಯ ಕಛೇರಿಯ  ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಅರುಣ್ ಕುಮಾರ್ ಪಾಣಿಗ್ರಾಹಿ, ವಲಯ ಕಛೇರಿಯ ಮುಖ್ಯ ವ್ಯವಸ್ಥಾಪಕಿ, ಶ್ರೀಮತಿ: ಕಸ್ತೂರಿ ಹಾಗೂ ಸ್ಥಳೀಯ ಶಾಖ ವ್ಯವಷ್ಟಾಪಕ ಶ್ರೀ ವಿನೋದ್  ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಾಗೂ ಇತರೆ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.