ನಂಜನಗೂಡು: ನಟ ದರ್ಶನ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಬೇಲ್ ವಿಚಾರ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ದರ್ಶನ್ ತಾಯಿ ಮೀನಾ ತೂಗುದೀಪ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಬೇಲ್ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಗೆ ವಿಚಾರಣೆ ನಡೆಯಿತು. ಈ ಹಿನ್ನೆಲೆಯಲ್ಲಿ ದರ್ಶನ್ ತಾಯಿ ಮೀನಾ ತೂಗುದೀಪ್ ಶ್ರೀ ನಂಜುಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.