ನಂಜನಗೂಡು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಆವರಣದಲ್ಲಿ ಇಂದು ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ವಿತಿಸಿ ಮಾತನಾಡಿದ ಅವರು, ಬಸವಣ್ಣನವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ತತ್ತ್ವಗಳು ಇಂದು ಕೂಡ ಸಮಾನತೆ, ನ್ಯಾಯ ಮತ್ತು ನೈತಿಕ ಬದುಕಿನ ದಾರಿ ತೋರಿಸುತ್ತವೆ ಬಸವಣ್ಣನವರ ಆದರ್ಶಗಳನ್ನು ಪಾಲಿಸಿ ಸ್ಮರಿಸೋಣ ಎಂದರು.

ಈ ಸಂದರ್ಭದಲ್ಲಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರಸಭಾ ಪೌರಯುಕ್ತರಾದ ವಿಜಯ್, ಶ್ವೇತ ಲಕ್ಷ್ಮಿ, ಗಾಯತ್ರಿ, ಲಿಂಗಾಯತ ಮಹಾಸಭಾದ ಅಧ್ಯಕ್ಷ ಸಿಂಧುವಳ್ಳಿ ಕೆಂಪಣ್ಣ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

