ನಂಜನಗೂಡು: ನಗರದಲ್ಲಿ ನೂತನವಾಗಿ ನಿರ್ಮಾಣವಾಗುವ ತಾಲ್ಲೂಕು ಮಟ್ಟದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶ್ರೀ ಪುರುಷೋತ್ತಮನಂದ ಪುರಿ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ದರ್ಶನ್ ಧ್ರುವನಾರಾಯಣ್, ಪುಟ್ಟರಂಗಶೆಟ್ಟಿ, ಡಿ. ರವಿಶಂಕರ್ , ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಯ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ,
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಪುರ ನಾಗರಾಜ್, ಮುಗಶೆಟ್ಟಿ, ಮುದ್ದು ಮಾದಶೆಟ್ಟಿ, ಸೋಮಣ್ಣ, ಮುದ್ದು ಮಾದ ಶೆಟ್ಟಿ, ಸೇರಿದಂತೆ ಹಲವರು ಭಾಗವಹಿಸಿದ್ದರು.

