ಮೈಸೂರು: ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

ಚಾಮುಂಡಿ ಬೆಟ್ಟದ ಮುಖ್ಯರಸ್ತೆಯ ತಡೆಗೋಡೆ ಪಕ್ಕದಲ್ಲಿ ಸುಮಾರು 50 ಮೀಟರ್ ಅಂತರದಲ್ಲಿ ಎರಡು ಮೃತದೇಹಗಳನ್ನು ಹಂತಕ ಒಂದೇ ಪ್ರದೇಶದಲ್ಲಿ ಬಿಸಾಡಿದ್ದ ಎನ್ನಲಾಗಿದೆ.

ಆರೋಪಿ ಇಂದುಶೇಖರ್‌ನನ್ನು ಪೊಲೀಸರು ಸ್ಥಳಕ್ಕೆ ಕರೆತಂದು ಮಹಜರ್ ನಡೆಸಿದ್ದು, ಕುಟುಂಬಸ್ಥರ ಸಮ್ಮುಖದಲ್ಲಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮೈಸೂರಿನ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.