ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಹಿನ್ನಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಕುವೆಂಪುನಗರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ ನಡೆಸಿ, ಧರ್ಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು.