ನಂಜನಗೂಡು: ಹಾಲಿನ ದರ ಮತ್ತು ವಿದ್ಯುತ್ ದರ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹುಲ್ಲಹಳ್ಳಿ ವೃತದ ಬಳಿ ಮಾಜಿ ಶಾಸಕ ಬಿ ಹರ್ಷವರ್ಧನ್ ಮತ್ತು ಬಿಜೆಪಿ ಮಂಡಲದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ಈಗಾಗಲೇ ಗ್ಯಾರಂಟಿಯ ಹೆಸರಿನಲ್ಲಿ ಸಾಕಷ್ಟು ಹಣವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಹಾಗೆಯೇ ಹಾಲಿನ ದರ, ವಿದ್ಯುತ್ ದರ, ಬಸ್ ಪ್ರಯಾಣದ ದರ, ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಸರಿಯಲ್ಲ. ಈ ಕೂಡಲೇ ಬೆಲೆ ಏರಿಕೆಯನ್ನು ಸರ್ಕಾರ ಇಮ್ ಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಿದ್ದರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಿಕ್ಕ ರಂಗನಾಯಕ, ಬಿಜೆಪಿ ಮಂಡಲದ ಅಧ್ಯಕ್ಷ ಕೆಂಡಗಣ್ಣಪ್ಪ, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.