ಮೈಸೂರು: ಬೆಂಗಳೂರಿನ ಕಾಲ್ತುಳಿತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

11 ಜನರ ಸಾವಿಗೆ ಕಾರಣರಾದ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕರ ಸಾವು ಎಂದು ಪ್ಲೇಕಾರ್ಡ್ ಹಿಡಿದು ಪ್ರತಿಭಟನೆ ಮಾಡಲಾಯಿತು.

ಕಾಂಗ್ರೆಸ್ ತೊಲಗಲಿ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ,ಜಿಲ್ಲಾ ಬಿಜೆಪಿ ನಗರ ಘಟಕದ ಎಲ್ ನಾಗೇಂದ್ರ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.