ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಹಾಗೂ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ರಾಮಸ್ವಾಮಿ ವೃತ್ತದಿಂದ ಜಿ.ಪಂ ಕಚೇರಿ ವರಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಪ ಅಸಂಖ್ಯಾತರ ಓಲೈಕೆ ಬಜೆಟ್, ಹಲಾಲ್ ಜಜೆಟ್, ನಿರಾಸದಾಯಕ ಬಜೆಟ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ, ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.